ರಸ್ತೆ ದಾಟುತ್ತಿದ್ದ ವೃದ್ಧನಿಗೆ ಬುಲೆಟ್ ಬೈಕ್ ಡಿಕ್ಕಿ..! ಮನೆಗೆ ವಾಪಸ್ಸಾಗಿದ್ದ ವೃದ್ಧ ಅನಾರೋಗ್ಯಕ್ಕೆ ಒಳಗಾಗಿ ಸಾವು..!

ರಸ್ತೆ ದಾಟುತ್ತಿದ್ದ ವೃದ್ಧನಿಗೆ ಬುಲೆಟ್ ಬೈಕ್ ಡಿಕ್ಕಿ..! ಮನೆಗೆ ವಾಪಸ್ಸಾಗಿದ್ದ ವೃದ್ಧ ಅನಾರೋಗ್ಯಕ್ಕೆ ಒಳಗಾಗಿ ಸಾವು..!

ಬೆಂಗಳೂರು : ರಸ್ತೆ ದಾಟುತ್ತಿದ್ದ ವೃದ್ಧನಿಗೆ ಬುಲೆಟ್ ಬೈಕ್ ಡಿಕ್ಕಿಯಾದ ಪರಿಣಾಮ ತೀವ್ರವಾಗಿ ಗಾಯಗೊಂಡ ಘಟನೆ ಸೆ 29ರಂದು ಮಧ್ಯಾಹ್ನ ಸರ್ಜಾಪುರ ರಸ್ತೆಯಲ್ಲಿ ನಡೆದಿದೆ‌.

ಬೈಕ್ ಚಾಲಕನ ಅತಿವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ.

ವೃದ್ಧ ಹನುಮಂತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ಸಾಗಿದ್ದಾರೆ. ಆದ್ರೆ ಮತ್ತೆ ಅನಾರೋಗ್ಯಕ್ಕೆ ಒಳಗಾಗಿ ಹನುಮಂತ ನಿನ್ನೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಎಚ್‌ಎಸ್‌ಆರ್ ಲೇಔಟ್ ಸಂಚಾರಿ ಠಾಣೆಯಲ್ಲಿ ದಾಖಲಾಗಿದೆ. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.