ರಾಜಕೀಯ ಇಕ್ಕಟ್ಟಿನಲ್ಲಿ ಸಿಲುಕಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ?

ರಾಜಕೀಯ ಇಕ್ಕಟ್ಟಿನಲ್ಲಿ ಸಿಲುಕಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ?

ಬೆಂಗಳೂರು: ಯುಗಾದಿ ಹಬ್ಬಕ್ಕೆ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದ್ದು, ಕಾಂಗ್ರೆಸ್​ ಪಾಳಯದಲ್ಲಿ ಚುನಾವಣಾ ಚಟುವಟಿಕೆ ಗರಿಗೆದರಿದೆ. ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ ಎಂಬ ವಿಚಾರ ಇದೀಗ ಚರ್ಚೆಯಾಗುತ್ತಿದೆ.

ಕೋಲಾರ ಕ್ಷೇತ್ರ ಬೇಡ ವರುಣಾದಲ್ಲಿ ನಿಲ್ಲಿ ಅಂತ ಕಾಂಗ್ರೆಸ್ ಹೈಕಮಾಂಡ್​ ಸಿದ್ದರಾಮಯ್ಯ ಅವರಿಗೆ ಹೇಳಿದೆ. ಅಸಲಿಗೆ ಸಿದ್ದರಾಮಯ್ಯ ಎರಡು ಕ್ಷೇತ್ರಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗುತ್ತಿದೆ. ಕೋಲಾರ ಹಾಗೂ ವರುಣಾ ಎರಡರಲ್ಲೂ ನಿಲ್ಲುವ ಪ್ಲಾನ್ ಅನ್ನು ಸಿದ್ದರಾಮಯ್ಯ ಹೊಂದಿದ್ದರು ಎಂದು ಹೇಳಲಾಗುತ್ತಿದೆ.

ಮಗನ ಹಾಗೂ ತಮ್ಮ‌ ರಾಜಕೀಯ ಭವಿಷ್ಯದ ಹಿನ್ನಲೆ ಎರಡೂ ಕ್ಷೇತ್ರವನ್ನು ಸಿದ್ದರಾಮಯ್ಯ ಆಯ್ಕೆ ಮಾಡಿದ್ದರು. ಎರಡರಲ್ಲೂ ಗೆದ್ದರೆ ವರುಣಾ ಕ್ಷೇತ್ರವನ್ನು ಯತೀಂದ್ರಗೆ ಬಿಟ್ಟುಕೊಡಲು ಪ್ಲಾನ್ ಮಾಡಿದ್ದರು. ಆದರೆ ಎರಡೂ ಕ್ಷೇತ್ರ ಆಯ್ಕೆಗೆ ಕಾಂಗ್ರೆಸ್​ನಲ್ಲಿ ವಿರೋಧ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.

ಹೈಕಮಾಂಡ್ ಸಲಹೆ ಮೇರೆಗೆ ವರುಣಾದಲ್ಲಿ ಸ್ಪರ್ಧೆ ಮಾಡಿದರೆ ಮಗನ ಭವಿಷ್ಯದ ಆತಂಕ ಸಿದ್ದರಾಮಯ್ಯ ಅವರಿಗೆ ಕಾಡುತ್ತಿದೆ ಎಂದು ಹೇಳಲಾಗಿದೆ. (ದಿಗ್ವಿಜಯ ನ್ಯೂಸ್​)