ರಾಜಕೀಯ ರಂಗ ಪ್ರವೇಶಿಸಿದ ಜನಾರ್ದನ ರೆಡ್ಡಿ ಪುತ್ರಿ !

ವಾರದ ಹಿಂದಷ್ಟೇ ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ಅವರು ರಾಜಕೀಯ ಅಖಾಡಕ್ಕೆ ಧುಮುಕಿದ ಬೆನ್ನಲ್ಲೇ ಇದೀಗ ರೆಡ್ಡಿ ಪುತ್ರಿ ಬ್ರಾಹ್ಮಿಣಿ ತನ್ನ ತಂದೆಯ ಜನ್ಮದಿನ ಜ.11ರಂದು ರಾಜಕೀಯ ರಂಗ ಪ್ರವೇಶ ಮಾಡಿದ್ದಾರೆ. ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಬ್ರಾಹ್ಮಿಣಿ, ತಂದೆ ಜನ್ಮದಿನದಂದು ನಾನು ನಿಮ್ಮ ಮುಂದೆ ಬಂದಿದ್ದೇನೆ. ಮುಂದಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ತಂದೆಯನ್ನು ಬೆಂಬಲಿಸಿ ಎಂದು ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಪ್ರಚಾರ ಮಾಡುವೆ ಎಂದು ಘೋಷಿಸಿದರು.