ರಾಜಕೀಯಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರು ಬಳಕೆ ಅಕ್ಷಮ್ಯ - HDK ಕಿಡಿ
ಬೆಂಗಳೂರು: ರಾಜ್ಯ ಸರಕಾರ ಮತ್ತು ಬಿಜೆಪಿ ನಾಯಕರು ನಾಡಪ್ರಭು ಕೆಂಪೇಗೌಡರ ಹೆಸರನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಜನರು ಕೂಡ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.ಬೆಂಗಳೂರು: ರಾಜ್ಯ ಸರಕಾರ ಮತ್ತು ಬಿಜೆಪಿ ನಾಯಕರು ನಾಡಪ್ರಭು ಕೆಂಪೇಗೌಡರ ಹೆಸರನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಜನರು ಕೂಡ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.
ಕೆಂಪೇಗೌಡ ಪ್ರತಿಮೆ ಅನಾವರಣ ಬಿಜೆಪಿ ಸರ್ಕಾರದ ನಿಯೋಜಿತ ಕಾರ್ಯಕ್ರಮ. ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ, ಹೋಗುತ್ತಾರೆ ಅಷ್ಟೇ. ಇದಕ್ಕೆ ನಾನು ಹೆಚ್ಚು ಮಹತ್ವ ಕೊಡಲು ಹೋಗುವುದಿಲ್ಲ ಎಂದರು.
ನರೇಂದ್ರ ಮೋದಿ ಅವರನ್ನು ಕರೆತಂದು ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿಸಿದರೆ ಒಕ್ಕಲಿಗರ ಮತಗಳು ಬರುತ್ತದೆಂದು ಬಿಜೆಪಿಯವರು ಆ ರೀತಿ ಭ್ರಮೆಯಲ್ಲಿದ್ದರೆ ಜನರೇ ಅದರಿಂದ ಹೊರ ತರುತ್ತಾರೆ ಎಂದು ಹೇಳಿದರು.ಬೆಂಗಳೂರು ದೊಡ್ಡಮಟ್ಟದಲ್ಲಿ ಬೆಳೆದಿದೆ. ಅದೇ ರೀತಿ ನಿರುದ್ಯೋಗ ಸಮಸ್ಯೆ ಇದೆ. ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತಾವಧಿಯಲ್ಲಿ ಬೆಂಗಳೂರಲ್ಲಿ ಹಲವಾರು ರೀತಿಯ ಅನಾಹುತ ಮಾಡಿದ್ದಾರೆ. ಅದನ್ನು ಸರಿಪಡಿಸುವ ಮೂಲಕ ಕೆಂಪೇಗೌಡರಿಗೆ ಗೌರವ ಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದರು.