ರಾಜಸ್ಥಾನದಲ್ಲಿ ಟೈಲರ್ ಶಿರಚ್ಛೇದ: ಎನ್ಐಎ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ
ನವದೆಹಲಿ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಶಿರಚ್ಛೇದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ವಿಚಾರಣೆ ನಡೆಸಲಿದೆ.
ಟೈಲರ್ ಕನ್ಹಯ್ಯ ಲಾಲ್ ಅವರ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯವು ಎನ್ಐಎಗೆ ನಿರ್ದೇಶನ ನೀಡಿದೆ.
MHA has directed the National Investigation Agency (NIA) to take over the investigation of the brutal murder of Shri Kanhaiya Lal Teli committed at Udaipur, Rajasthan yesterday.
— गृहमंत्री कार्यालय, HMO India (@HMOIndia) June 29, 2022
The involvement of any organisation and international links will be thoroughly investigated.
ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್ವೊಂದನ್ನು ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ಮಂಗಳವಾರ ಕತ್ತು ಸೀಳಿ ಹತ್ಯೆ ಮಾಡಿದ್ದರು.
ಈ ಘಟನೆ ಖಂಡಿಸಿ ರಾಜಸ್ಥಾನದ ಜತೆಗೆ ದೇಶದ ವಿವಿಧೆಡೆ ಪ್ರತಿಭಟನೆಗಳು ಆರಂಭವಾಗಿವೆ.
ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.