ರಾಜಸ್ಥಾನದಲ್ಲಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಅರೆಸ್ಟ್

ರಾಜಸ್ಥಾನದಲ್ಲಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಅರೆಸ್ಟ್

ನಕಪುರದ ಸಾತನೂರು ಬಳಿ ಗೋ ಸಾಗಾಣಿಕೆ ವೇಳೆ ವ್ಯಕ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನದಲ್ಲಿ ಈ ಐವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದ್ದು, ಪುನೀತ್ ಕೆರೆಹಳ್ಳಿ ಮತ್ತು ಇತರರ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಇವರುಗಳ ಬಂಧನಕ್ಕಾಗಿ ಪೊಲೀಸರು 4 ತಂಡಗಳನ್ನು ರಚಿಸಿದ್ದರು.

ಇದರ ಮಧ್ಯೆ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ ಪುನೀತ್ ಕೆರೆಹಳ್ಳಿ, ನಾನು ಯಾವುದೇ ಅಪರಾಧ ಮಾಡಿಲ್ಲ. ದೇವಾಲಯಗಳಿಗೆ ಭೇಟಿ ನೀಡುತ್ತಿದ್ದ ಕಾರಣ ಮೊಬೈಲ್ ಸ್ವಿಚ್ ಆಫ್ ಮಾಡಿದ್ದೆ. ಪೊಲೀಸರ ತನಿಖೆಗೆ ಸಹಕರಿಸುವುದಾಗಿ ಹೇಳಿದ್ದರು.