ರಾಜೀವ್ ಗಾಂಧಿ ವಿವಿ ಆಸ್ಪತ್ರೆಗೆ `ಕೆಂಗಲ್ ಹನುಮಂತಯ್ಯ' ಹೆಸರು : ಸಿಎಂ ಬೊಮ್ಮಾಯಿ ಘೋಷಣೆ

ರಾಜೀವ್ ಗಾಂಧಿ ವಿವಿ ಆಸ್ಪತ್ರೆಗೆ `ಕೆಂಗಲ್ ಹನುಮಂತಯ್ಯ' ಹೆಸರು : ಸಿಎಂ ಬೊಮ್ಮಾಯಿ ಘೋಷಣೆ

ರಾಮನಗರ : ರಾಮನಗರದ ಹೊರ ವಲಯದ ಅರ್ಚಕರಹಳ್ಳಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸ್ಥಾಪನೆ ಮಾಡುತ್ತಿದ್ದು, ಈ ವಿವಿಯ ಆಸ್ಪತ್ರೆಗೆ ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯರವರ ಹೆಸರು ನಾಮಕಾರಣ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ರಾಜೀವ್ ಗಾಂಧಿ ಅರೋಗ್ಯ ವಿವಿ, ಸರ್ಕಾರಿ ವೈದ್ಯಕೀಯ ಕಾಲೇಜು, ಆಸ್ಪತ್ರೆ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜೀವ್ ಗಾಂಧಿ ಆರೋಗ್ಯ ವಿವಿ ಆಸ್ಪತ್ರೆಗೆ ಮಾಜಿ ಮುಖ್ಯಮಮಂತ್ರಿ ಕೆಂಗಲ್ ಹನುಮಂತಯ್ಯರವರ ಹೆಸರಿಡುವಂತೆ ಸಚಿವ ಅಶ್ವತ್ಥನಾರಾಯಣ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ಸಲ್ಲಿಸಿರುವ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ ಎಂದರು.

ವಿಶ್ವವಿದ್ಯಾಲಯದ ಸಿಂಡಿಕೇಟ್ ನಲ್ಲಿ ವಿವಿ ಆಸ್ಪತ್ರೆಗೆ ಕೆಂಗಲ್ ಹನುಮಂತಯ್ಯನವರ ಹೆಸರಿಡುವ ಪ್ರಸ್ತಾವನೆ ತಂದು ಒಪ್ಪಿಗೆ ನೀಡುವಂತೆ ಸೂಚನೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.