ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ರದ್ದು
ಹುಬ್ಬಳ್ಳಿ: ಇಲ್ಲಿನ ಡೆನಿಸನ್ಸ್ ಹೋಟೆಲ್ ನಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯ ಭಾಗವಾಗಿ ಆಯೋಜನೆಯಾಗಿದ್ದ ಕೋರ್ ಕಮಿಟಿ ಸಭೆಯನ್ನು ರದ್ದು ಮಾಡಲಾಗಿದೆ.
ಬುಧವಾರ ಮಧ್ಯಾಹ್ನ 2.30ಕ್ಕೆ ಕೋರ್ ಕಮಿಟಿ ಸಭೆ ನಿಗದಿಯಾಗಿತ್ತು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಶಾಸಕ ಯಡಿಯೂರಪ್ಪ ಅವರು ಸಭೆಯಲ್ಲಿ ಪಾಲ್ಗೊಳ್ಳದ ಕಾರಣ ಸಭೆ ರದ್ದು ಪಡಿಸಲಾಗಿದೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.