ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಅಂಬರೀಶ್ ಎಂಟ್ರಿ

ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಅಂಬರೀಶ್ ಎಂಟ್ರಿ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಇದೀಗ ಚುನಾವಣೆಯ ಚುಕ್ಕಾಣಿ ಹಿಡಿಯಲು ಬಿಗ್ ಪ್ಲಾನ್ ಮಾಡಿದೆ.

ಹೌದು, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ಉದ್ದೇಶದಿಂದ ಸಂಸದೆ ಸುಮಲತಾ ಅಂಬರೀಶ್ ಅವರನ್ನು ರಾಜ್ಯ ರಾಜಕಾರಣಕ್ಕೆ ಕರೆತರಲು ಸಿದ್ಧತೆ ನಡೆಸಿದೆ.

ಪ್ರಮುಖವಾಗಿ ಜೆಡಿಎಸ್ ಭದ್ರಕೋಟೆ ಎಂದು ಪರಿಗಣಿಸಲಾದ ಮಂಡ್ಯ ಜಿಲ್ಲೆಯನ್ನು ವಶಪಡಿಸಿಕೊಳ್ಳಲು ಬಿಜೆಪಿ ಶತಾಯುಗತಾಯ ಪ್ರಯತ್ನಿಸುತ್ತಿದೆ ಎನ್ನಲಾಗಿದೆ.

ಮಂಡ್ಯ ವಿಧಾನಸಭೆ ಕ್ಷೇತ್ರದಿಂದ ನಟಿ ಹಾಗೂ ರಾಜಕಾರಣಿ ಸುಮಲತಾರನ್ನು ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಜೊತೆಗೆ ಮಂಡ್ಯದ ಇತರೆ ಕ್ಷೇತ್ರದಲ್ಲಿಯೂ ಸುಮಲತಾ ಅವರನ್ನು ಬಳಸಿಕೊಂಡು ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಮುಂದಾಗಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ ಸುಮಲತಾರಿಗೆ ಬಿಜೆಪಿ ಬೆಂಬಲ ಘೋಷಿಸಿತ್ತು. ಇದೀಗ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.