ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಎಂಟ್ರಿ ಫಿಕ್ಸ್

ಮಂಡ್ಯ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಆಗಮನ ಬಹುತೇಕ ಖಚಿತವಾಗಿದೆ.
ಜನವರಿ 31ರಂದು ಸುಮಲತಾ ಬೆಂಬಲಿಗರ ಸಭೆ ನಡೆದಿತ್ತು. ಸಭೆಯಲ್ಲಿ ಸುಮಲತಾ ರಾಜ್ಯ ರಾಜಕಾರಣಕ್ಕೆ ಬರಬೇಕು ಎಂದು ಒತ್ತಾಯಿಸಲಾಗಿತ್ತು.
ಅಲ್ಲದೇ ಪತಿ ಅಂಬರೀಷ್ ಪ್ರತಿನಿಧಿಸಿದ್ದ ಮಂಡ್ಯ ಕ್ಷೇತ್ರದಿಂದ ಸುಮಲತಾ ಸ್ಪರ್ಧೆಗೆ ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಪಕ್ಷದ ಬಗ್ಗೆ ಮಾತ್ರ ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಲಾಗುತ್ತಿದೆ.