ರಾಜ್ಯ ರಾಜಕೀಯಕ್ಕೆ ನಟ ಸುದೀಪ್ ಎಂಟ್ರಿ : ಕಾಂಗ್ರೆಸ್ ಗೆ ಬರುವಂತೆ ರಮ್ಯಾ ಮೂಲಕ ಆಹ್ವಾನ?

ರಾಜ್ಯ ರಾಜಕೀಯಕ್ಕೆ ನಟ ಸುದೀಪ್ ಎಂಟ್ರಿ : ಕಾಂಗ್ರೆಸ್ ಗೆ ಬರುವಂತೆ ರಮ್ಯಾ ಮೂಲಕ ಆಹ್ವಾನ?

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಎಂಟ್ರಿ ಕೊಡುವ ಕುರಿತಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಈ ನಡುವೆ ನಟಿ, ಮಾಜಿ ಸಂಸದೆ ರಮ್ಯಾ ಮೂಲಕ ಸುದೀಪ್ ಗೆ ಕಾಂಗ್ರೆಸ್ ಸೇರುವಂತೆ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಇದೀಗ ನಟ ಸುದೀಪ್ ಕಾಂಗ್ರೆಸ್ ಗೆ ಸೇರುವಂತೆ ರಮ್ಯಾ ಮೂಲಕ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ. ಸುದೀಪ್ ಮತ್ತು ರಮ್ಯಾ ಒಳ್ಳೆಯ ಸ್ನೇಹಿತರಾಗಿದ್ದು, ರಮ್ಯಾ ಮೂಲಕ ಸುದೀಪ್ ಕಾಂಗ್ರೆಸ್ ಸೇರುವಂತೆ ಆಹ್ವಾನ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನು ಇದಕ್ಕೂ ಮುನ್ನ ಫೆ. 2 ರಂದುಖಾಸಗಿ ಹೋಟೆಲ್ ನಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಕಿಚ್ಚ ಸುದೀಪ್ ಮಾತುಕತೆ ನಡೆಸಿದ್ದು, ಜೊತೆಗೆ ಒಟ್ಟಿಗೆ ಊಟ ಮಾಡಿದ್ದಾರೆ, ಈ ವೇಳೆ ಚುನಾವಣಾ ಪ್ರಚಾರ ಸಭೆಗಳಿಗೆ ಬರುವಂತೆ ಕಿಚ್ಚ ಸುದೀಪ್ ಗೆ ಡಿ.ಕೆ. ಶಿವಕುಮಾರ್ ಆಹ್ವಾನಿಸಿದ್ದಾರೆ ಎನ್ನಲಾಗಿದೆ.

ಉತ್ತರ ಕರ್ನಾಟಕದಲ್ಲಿ ವಾಲ್ಮೀಕಿ ಸಮುದಾಯ ಬೃಹತ್ ಸಂಖ್ಯೆಯಲ್ಲಿದ್ದು, ಬಿಜೆಪಿಯಲ್ಲಿ ವಾಲ್ಮೀಕಿ ಸಮುದಾಯದಿಂದ ಶ್ರೀರಾಮುಲು ಮುಂಚೂಣಿಯಲ್ಲಿದ್ದಾರೆ. ಇತ್ತೀಚಿಗೆ ಮೀಸಲಾತಿ ಪ್ರಮಾಣ ಹೆಚ್ಚಳದಿಂದ ಸಮುದಾಯದ ಮತಗಳು ಬಿಜೆಪಿಯತ್ತ ಧೃವೀಕರಣವಾಗಿದೆ. ಕಾಂಗ್ರೆಸ್ ಗೆ ಸುದೀಪ್ ಆಗಮಿಸಿದರೆ ವಾಲ್ಮೀಕಿ ಮತಗಳನ್ನು ತನ್ನತ್ತ ಸೆಳೆಯಲು ಸಹಕಾರವಾಗುತ್ತದೆ ಎಂಬ ಲೆಕ್ಕಚಾರದಲ್ಲಿ ಸುದೀಪ್ ಅವರನ್ನು ಕಾಂಗ್ರೆಸ್ ಗೆ ಆಹ್ವಾನಿಸಲಾಗಿದೆ ಎನ್ನಲಾಗಿದೆ.