ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ : ಕೋಡಿಮಠದ ಶ್ರೀಗಳ ಭವಿಷ್ಯ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಹೊತ್ತಲ್ಲೇ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದು, ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಶ್ರೀಗಳು, ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷ ಮತ್ತೊಂದು ಪಕ್ಷದ ಜೊತೆಗೆ ಕೂಡಿ ಹೋಗುವುದು ಕಷ್ಟ. ಚುನಾವಣೆ ವೇಳೆ ಪಕ್ಷಾಂತರ ಸಾಮಾನ್ಯ, ಪಕ್ಷಗಳು ಇಬ್ಭಾಗುವ ಲಕ್ಷಣ ಇದೆ. ಆದರೂ ರಾಜ್ಯದಲ್ಲಿ ಈ ಬಾರಿ ಒಂದೇ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.
ಇನ್ನು ರಾಜ್ಯದ ಸ್ಥಿತಿಗತಿ ಕುರಿತಂತೆ ಮಾತನಾಡಿದ ಶ್ರೀಗಳು, ಮುಂದೆ ಮೂರು ವರ್ಷ ಎಷ್ಟು ಸುಖವಿದೆಯೋ ಅಷ್ಟೇ ಕಷ್ಟ ಇದೆ. ಹಿಂದೂ ಸಂಪ್ರದಾಯದ ಪ್ರಕಾರ ಯುಗಾದಿ ನಂತರ ವಿವರವಾಗಿ ಹೇಳುತ್ತೇನೆ ಎಂದರು.