ರಾಜ್ಯ ಸರ್ಕಾರದಿಂದ `ಕುರಿಗಾಹಿ'ಗಳಿಗೆ ಭರ್ಜರಿ ಗುಡ್ ನ್ಯೂಸ್ : `ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ' ಜಾರಿ

ರಾಜ್ಯ ಸರ್ಕಾರದಿಂದ `ಕುರಿಗಾಹಿ'ಗಳಿಗೆ ಭರ್ಜರಿ ಗುಡ್ ನ್ಯೂಸ್ : `ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ' ಜಾರಿ

ಬೆಂಗಳೂರು : ಕುರಿಗಾಹಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕುರಿಗಾಹಿಗಳಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಟ್ಟು ಆರ್ಥಿಕವಾಗಿ ಬಲವರ್ಧನೆ ಮಾಡುವ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಜಾರಿಗೊಳಿಸಲಾಗಿದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ರೂ. 354 ಕೋಟಿಯಲ್ಲಿ ಕುರಿಗಾರರಿಗೆ 20 ಕುರಿ 1 ಮೇಕೆ ವಿತರಣಾ ಯೋಜನೆ ಘೋಷಣೆ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುರಿದೊಡ್ಡಿಗೆ ಶೆಡ್ ನಿರ್ಮಿಸಿಕೊಳ್ಳಲು ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಕುರಿಗಾಹಿಗಳಿಗೆ 20 ಕುರಿ ಮತ್ತು ಒಂದು ಮೇಕೆ ನೀಡುವ ತೆಲಂಗಾಣ ಮಾದರಿ ಯೋಜನೆಯನ್ನು ಘೋಷಣೆ ಹಿನ್ನೆಲೆಯಲ್ಲಿ ಸಿಎಂ ಅವರನ್ನು ಭಾನುವಾರ ಮಹಾ ಮಂಡಳದ ವತಿಯಿಂದ ಸನ್ಮಾನಿಸಲಾಯಿತು.

ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ 20,000 ಸದಸ್ಯರು ಯೋಜನೆ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ. ಪ್ರತಿ ಸದಸ್ಯರಿಗೆ 20 ಕುರಿ, ಒಂದು ಮೇಕೆ ನೀಡಲಾಗುವುದು. 1.75 ಲಕ್ಷ ರೂಪಾಯಿ ಘಟಕ ವೆಚ್ಚದಲ್ಲಿ ಶೇಕಡ 50ರಷ್ಟು ಮೊತ್ತವನ್ನು ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮದಿಂದ ಸಾಲವಾಗಿ ನೀಡಲಾಗುತ್ತದೆ. ಶೇಕಡ 25ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಸಹಾಯಧನ ರೂಪದಲ್ಲಿ ನೀಡಲಿದೆ. ಉಳಿದ ಮೊತ್ತವನ್ನು ಫಲಾನುಭವಿ ವಂತಿಗೆಯಾಗಿ ನೀಡಲಿದೆ.