ರಾಜ್ಯ ಸರ್ಕಾರದಿಂದ ಎಸ್ಸಿ, ಎಸ್ಟಿ ಮೀಸಲು ಏರಿಕೆ ಮಸೂದೆ ಮಂಡನೆ

ರಾಜ್ಯ ಸರ್ಕಾರದಿಂದ ಎಸ್ಸಿ, ಎಸ್ಟಿ ಮೀಸಲು ಏರಿಕೆ ಮಸೂದೆ ಮಂಡನೆ

ಬೆಳಗಾವಿ: ರಾಜ್ಯ ಸರ್ಕಾರವು ಎಸ್ಸಿ, ಎಸ್ಟಿ ವರ್ಗದವರಿಗೆ ಶಿಕ್ಷಣ & ಉದ್ಯೋಗದಲ್ಲಿನ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಸಂಬಂಧ ಹೊರಡಿಸಿದ್ದ ಸುಗ್ರೀವಾಜ್ಞೆಯ ಮುಂದುವರೆದ ಭಾಗವಾಗಿ ಮಂಗಳವಾರ (ಡಿ.20) ಸದನದಲ್ಲಿ ಎಸ್ಸಿ, ಎಸ್ಟಿ ಮೀಸಲು ಏರಿಕೆ ಮಸೂದೆ ಮಂಡನೆ ಮಂಡಿಸಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಪರವಾಗಿ ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕ ಮಂಡಿಸಿದರು. ಎಸ್ಸಿ ವರ್ಗಕ್ಕೆ ಶೇ.17ಕ್ಕೆ & ಎಸ್ಟಿ ವರ್ಗದ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸುವ ಕುರಿತು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.