ರಾಜ್ಯ ಸರ್ಕಾರದಿಂದ `SC-ST' ಸಮುದಾಯಕ್ಕೆ ಗುಡ್ ನ್ಯೂಸ್ : ಶೀಘ್ರವೇ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿಗೆ ಸುಗ್ರೀವಾಜ್ಞೆ

ರಾಜ್ಯ ಸರ್ಕಾರದಿಂದ `SC-ST' ಸಮುದಾಯಕ್ಕೆ ಗುಡ್ ನ್ಯೂಸ್ : ಶೀಘ್ರವೇ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿಗೆ ಸುಗ್ರೀವಾಜ್ಞೆ

ಬೆಂಗಳೂರು : ರಾಜ್ಯ ಸರ್ಕಾರವು ಎಸ್ ಸಿ-ಎಸ್ ಟಿ ಸಮುದಾಯಕ್ಕೆ ಶಿಕ್ಷಣ, ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲು ಪ್ರಮಾಣ ಹೆಚ್ಚಿಳಕ್ಕೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಎಸ್ ಸಿ ಗೆ ಶೇ. 15 ರಿಂದ 17 ಹಾಗೂ ಎಸ್ ಟಿ ಗೆ ಶೇ. 3 ರಿಂದ 7 ಕ್ಕೆ ಮೀಸಲು ಪ್ರಮಾಣ ಹೆಚ್ಚಿಸಲು ರಾಜ್ಯ ಸರ್ಕಾರ ಈಗಾಗಲೇ ನಿರ್ಧರಿಸಿದ್ದು, ವಿಧಾನ ಮಂಡಲದ ಬೆಳಗಾವಿ ಅಧಿವೇಶನದವರೆಗೂ ಕಾಯದೆ ಸುಗ್ರೀವಾಜ್ಞೆ ಮೂಲಕ 2-3 ದಿನಗಳಲ್ಲಿ ಜಾರಿಗೊಳಿಸಿ ಸಮುದಾಯಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶವಿದೆ ಎಂದು ಸರ್ಕಾರ ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಶ್ರೀರಾಮುಲು, ಶಿಕ್ಷಣ ಮತ್ತು ಉದ್ಯೋಗದಲ್ಲಿ ತಕ್ಷಣದಿಂದಲೇ ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲು ಕಲ್ಪಿಸಲು ಸುಗ್ರೀವಾಜ್ಞೆ ಜಾರಿಗೊಳಿಸಲಾಗುವುದು. ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.