ರಾಜ್ಯ ಸರ್ಕಾರದಿಂದ ಮಹಿಳೆಯರು, ಯುವಕರಿಗೆ ಗುಡ್ ನ್ಯೂಸ್ : ಸ್ವಉದ್ಯೋಗಕ್ಕಾಗಿ ಸ್ತ್ರೀ ಸಾಮರ್ಥ್ಯ, ಯುವಶಕ್ತಿ ಯೋಜನೆ ಪ್ರಾರಂಭ

ಮೈಸೂರು : ಮಹಿಳೆಯರು ಮತ್ತು ಯುವಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಮಹಿಳೆಯರು, ಯುವಕರ ಸ್ವಯಂ ಉದ್ಯೋಗಕ್ಕೆ ಸ್ತ್ರೀ ಸಾಮರ್ಥ್ಯ ಹಾಗೂ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ ಪ್ರಾರಂಭಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಂಜನಗೂಡು ಪಟ್ಟಣದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಮಹಿಳೆಯರು, ಯುವಕರ ಸ್ವಯಂ ಉದ್ಯೋಗಕ್ಕೆ ಸ್ತ್ರೀ ಸಾಮರ್ಥ್ಯ ಹಾಗೂ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ ಪ್ರಾರಂಭಿಸಲಾಗುತ್ತಿದೆ. ಪ್ರತಿ ಗ್ರಾಮದಲ್ಲಿ 2 ಸ್ವಸಹಾಯ ಸಂಘಗಳಿಗೆ ತಲಾ 5 ಲಕ್ಷ ರೂ. ಸಹಾಯಧನ ನೀಡುವ ಮೂಲಕ ಸ್ವಉದ್ಯೋಗಕ್ಕೆ ಉತ್ತೇಜನ ನೀಡಲಾಗುವುದು ಎಂದು ಹೇಳಿದ್ದಾರೆ.