ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ಕುಮ್ಕಿ ಜಮೀನು' ಗುತ್ತಿಗೆ ನೀಡಲು ನಿರ್ಧಾರ

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ಕುಮ್ಕಿ ಜಮೀನು' ಗುತ್ತಿಗೆ ನೀಡಲು ನಿರ್ಧಾರ

ಡುಪಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕುಮ್ಕಿ ಜಮೀನಿನಲ್ಲಿ ಕೃಷಿ ಮಾಡಲು 30 ವರ್ಷ ಗುತ್ತಿಗೆ ನೀಡಲು ಸರಕಾರ ನಿರ್ಧರಿಸಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಮಾಡಾವು-ಸುಳ್ಯ ವಿದ್ಯುತ್‌ ಪ್ರಸರಣ ಮಾರ್ಗದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು,ಡೀಮ್ಡ್‌ ಫಾರೆಸ್ಟ್‌ ಸಮಸ್ಯೆ ಪರಿಹಾರವಾಗಿದೆ. ಅಲ್ಲದೆ ಕುಮ್ಕಿ ಜಮೀನಿನಲ್ಲಿ ಕೃಷಿ ಮಾಡಲು 30 ವರ್ಷ ಗುತ್ತಿಗೆ ನೀಡಲು ಸರ್ಕಾರ ನಿರ್ಧರಿಸಿದೆ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ಹತ್ತು ವರ್ಷಗಳ ವಿದ್ಯುತ್‌ ಬೇಡಿಕೆ ಮುಂದಿರಿಸಿ ಜಿಲ್ಲೆಯಲ್ಲಿ ಪ್ರಸ್ತಾವನೆಯಲ್ಲಿದ್ದ ಹನ್ನೊಂದು 110 ಕೆವಿ ಸಬ್‌ಸ್ಟೇಷನ್‌ಗಳಿಗೆ ಮಂಜೂರಾತಿ ನೀಡಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿದ್ದ ಹಲವಾರು ವಿದ್ಯುತ್‌ ಯೋಜನೆಗಳಿಗೆ ಕಳೆದ ಒಂದೂವರೆ ವರ್ಷದಲ್ಲಿ ಮಂಜೂರಾತಿ ನೀಡಲಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ ರಾಜ್ಯದಲ್ಲಿ 200 ಸಬ್‌ಸ್ಟೇಷನ್‌ ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.