'ರಾಜ್ಯ ಸರ್ಕಾರಿ ನೌಕರ'ರಿಗೆ ಗುಡ್ ನ್ಯೂಸ್: 'ವೇತನ ಮತ್ತು ಭತ್ಯೆಗಳ ಪರಿಷ್ಕರಣೆ'ಗೆ ಸಮಿತಿ ರಚನೆಗೆ ಸಿಎಂ ಬೊಮ್ಮಾಯಿ ಸೂಚನೆ

'ರಾಜ್ಯ ಸರ್ಕಾರಿ ನೌಕರ'ರಿಗೆ ಗುಡ್ ನ್ಯೂಸ್: 'ವೇತನ ಮತ್ತು ಭತ್ಯೆಗಳ ಪರಿಷ್ಕರಣೆ'ಗೆ ಸಮಿತಿ ರಚನೆಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ದಿನದ ಭೇಟಿಕೆ ಈಡೇರಿಕೆಗಾಗಿ, ಸಿಎಂ ಬಸವರಾಜ ಬೊಮ್ಮಾಯಿಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗಾಗಿ ವೇತನ ಸಮಿತಿ, ಆಯೋಗ ರಚಿಸೋದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಂದ ಅಕ್ಟೋಬರ್-2022ರ ಮಾಹೆಯಲ್ಲಿಯೇ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗೆ

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ 'ಕೃಷ್ಣ'ದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸರ್ಕಾರದ 'ಪುಣ್ಯಕೋಟಿ ದತ್ತು ಯೋಜನೆ'ಗೆ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಇತರೆ ಸಂಸ್ಥೆಗಳ ನೌಕರರ ದೇಣಿಗೆ ನೀಡುವ ಒಪ್ಪಿಗೆ ಪತ್ರವನ್ನು ನೀಡಲಾಯಿತು.

ಈ ಚರ್ಚೆ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಇದೇ ತಿಂಗಳಲ್ಲಿ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗೆ ವೇತನ ಸಮಿತಿ/ಆಯೋಗ ರಚಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ವೇತ

ಇನ್ನೂ ವೇತನ ಸಮಿತಿ/ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನ ಮಾಡುವ ಸಂದರ್ಭದಲ್ಲಿ ವೇತನ ಭತ್ಯೆಗಳ ಜೊತೆ ನೌಕರರಿಗೆ ಇನ್ಸೆಂಟೀವ್ ಸೌಲಭ್ಯಗಳನ್ನು ನೀಡುವ ಉದ್ದೇಶವನ್ನು ಹೊಂದಲಾಗಿದ್ದು, ಆ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

ಎನ್.ಪಿ.ಎಸ್. ರದ್ದುಪಡಿಸುವ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಸಂಬಂಧ ಅನ್ಯ ರಾಜ್ಯಗಳಿಂದ ಮಾಹಿತಿಯನ್ನು ಸಂಗ್ರಹಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸ್ಪಷ್ಟ ಭರವಸೆಯನ್ನು ನೀಡಿರುತ್ತಾರೆ. ಇದಕ್ಕಾಗಿ ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘವು ಧನ್ಯವಾದಗಳನ್ನು ಸಲ್ಲಿಸಿದೆ.

ನ ಸಮಿತಿ/ಆಯೋಗ ರಚಿಸಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಲಾಯಿತು.