ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: 'KPSC' ಯಿಂದ ವಿವಿಧ ಇಲಾಖಾ ಪರೀಕ್ಷೆಗಳಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ( Karnataka Government Employees ) ಬಡ್ತಿ, ಮುಂಬಡ್ತಿ ಸೇರಿದಂತೆ ವಿವಿಧ ಪ್ರಯೋಜನಕ್ಕಾಗಿ ಇಲಾಖಾ ಪರೀಕ್ಷೆಗಳನ್ನು ತೇರ್ಗಡೆ ಮಾಡುವುದು ಕಡ್ಡಾಯವಾಗಿದೆ. 2021ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಇಂದು ಕರ್ನಾಟಕ ಲೋಕಾಸೇವಾ ಆಯೋಗದಿಂದ ( Karnataka Public Service Commission - KPSC ) 2021ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.ಇಲಾಖಾ ಪರೀಕ್ಷೆಗಳನ್ನು ದಿನಾಂಕ 19-05-2023ರಿಂದ 01-06-2023ರವರೆಗೆ ನಿಗದಿ ಪಡಿಸಲಾಗಿದೆ.
ಇನ್ನೂ ಆನ್ ಲೈನ್ ಮಾದರಿಯ ಕಂಪ್ಯೂಟರ್ ಬೇಸ್ಡ್ ಟೆಸ್ಟ್ ಅನ್ನು ದಿನಾಂಕ 09-06-2023 ರಿಂದ ದಿನಾಂಕ 11-06-2023ರಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂಬುದಾಗಿ ತಿಳಿಸಿದೆ.
ಆನ್ ಲೈನ್ ಮಾದರಿಯಲ್ಲಿ ವಿವರಣಾತ್ಮಕ ಪರೀಕ್ಷೆಯನ್ನು ದಿನಾಂಕ 17-06-2023ರಿಂದ 21-06-2023ರವರೆಗೆ ಬೆಂಗಳೂರು ಕೇಂದ್ರದಲ್ಲಿ ಮಾತ್ರವೇ ನಡೆಸಲಾಗುತ್ತದೆ ಎಂಬುದಾಗಿ ಕರ್ನಾಟಕ ಲೋಕಸೇವಾ ಆಯೋಗದಿಂದ ಮಾಹಿತಿ ನೀಡಿದೆ.
ಹೀಗಿದೆ ಇಲಾಖಾ ಪರೀಕ್ಷೆ ಹಾಗೂ ಸಿಬಿಟಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ
ಗೃಹ ಸಚಿವ 'ಆರಗ ಜ್ಞಾನೇಂದ್ರ' ತವರೂರಲ್ಲೇ ಚುನಾವಣಾ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ
ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ತವರೂರಲ್ಲೇ ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.
ವಿಧಾನಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಗ್ರಾಮಸ್ಥರು ರಸ್ತೆ ದುರಸ್ತಿ ಮಾಡದ ಜನಪ್ರತಿನಿಧಿಗಳ ವಿರುದ್ಧ ಸಿಡಿದೆದ್ದಿದ್ದಾರೆ. ಹುಂಚದಕಟ್ಟೆ ರಸ್ತೆ ದುರಸ್ತಿ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಕೂಡ ಜನಪ್ರತಿನಿಧಿಗಳು ತಲೆಕೆಡಿಸಿಕೊಂಡಿರಲಿಲ್ಲ, ಈ ಹಿನ್ನೆಲೆ ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
'RTO' ಅಧಿಕಾರಿಗೆ ಜನಾರ್ಧನ ರೆಡ್ಡಿ ಗಾಳ : ನೆಲಮಂಗಲದಿಂದ ಸ್ಪರ್ಧಿಸುವಂತೆ 'KRPP' ಆಫರ್
ಬೆಂಗಳೂರು : ವಿಧಾನಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ 'RTO' ಅಧಿಕಾರಿಗೆ 'KRPP' ಪಕ್ಷದ ಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಆಫರ್ ನೀಡಿದ್ದು, ನೆಲಮಂಗಲದಿಂದ ಸ್ಪರ್ಧಿಸುವಂತೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.
ಆರ್ ಟಿ ಒ ಅಧಿಕಾರಿ ಎನ್ ನಾಗೇಶ್ ಕುಮಾರ್ ಗೆ ಜನಾರ್ಧನ ರೆಡ್ಡಿ ಆಫರ್ ನೀಡಿದ್ದು, ನೆಲಮಂಗಲದಿಂದ ಸ್ಪರ್ಧಿಸುವಂತೆ ಆಹ್ವಾನ ನೀಡಿದ್ದಾರೆ , ಈಗಾಗಲೇ ಈ ಸಂಬಂಧ ಮಾತುಕತೆ ನಡೆಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ನಾಗೇಶ್ ಕುಮಾರ್ ಗೆ ಗಾಲಿ ಜನಾರ್ಧನ ರೆಡ್ಡಿ ಇಂತಹದ್ದೊಂದು ಆಫರ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ವಿಧಾನಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ರಾಜಕೀಯ ಪಕ್ಷಗಳು ಅಲರ್ಟ್ ಆಗಿದ್ದು, ಮತದಾರರನ್ನು ಸೆಳೆಯುವ ಕಸರತ್ತು ಮಾಡುತ್ತಿದೆ. ಅಲ್ಲದೇ ಟಿಕೆಟ್ ಆಕಾಂಕ್ಷಿಗಳ ಫೈಟ್, ಪಕ್ಷಾಂತರ ಪರ್ವ ಕೂಡ ಶುರುವಾಗಿದೆ.