ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಹಿನ್ನಲೆ: ಅನಿರ್ಧಿಷ್ಟಾವಧಿ ಮುಷ್ಕರ ವಾಪಾಸ್

ಬೆಂಗಳೂರು: ರಾಜ್ಯ ಸರ್ಕಾರ ಎರಡು ತಿಂಗಳ ಕಾಲಾವಕಾಶವನ್ನು 7ನೇ ವೇತನ ಆಯೋಗ ಜಾರಿಗೆ ಸಂಬಂಧಿಸಿದಂತೆ ತೆಗೆದುಕೊಂಡು, ಇದೀಗ ಮಧ್ಯಂತರ ಪರಿಹಾರವಾಗಿ ಸರ್ಕಾರಿ ನೌಕರರ ಶೇ.17ರಷ್ಟು ಮೂಲ ವೇತನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ ಆರಂಭಿಸಲಾಗಿದ್ದಂತ ರಾಜ್ಯ ಸರ್ಕಾರಿ ನೌಕರರ ಮುಷ್ಕರವನ್ನು ವಾಪಾಸ್ ಪಡೆಯುತ್ತಿರೋದಾಗಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ತಿಳಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರ ನಮ್ಮ ಬೇಡಿಕೆ ಈಡೋರಿಸೋ ನಿಟ್ಟಿನಲ್ಲಿ ಕ್ರಮವನ್ನು ಕೈಗೊಂಡಿದೆ. ಅಧಿಕೃತವಾಗಿ ಸರ್ಕಾರವು ನೌಕರರ ವೇತನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಷರತ್ತಿಗೆ ಒಳಪಟ್ಟು, ಇಂದಿನಿಂದ ಆರಂಭಗೊಂಡಿದ್ದಂತ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿಯ ಮುಷ್ಕರವನ್ನು ವಾಪಾಸ್ ಪಡೆಯುತ್ತಿರೋದಾಗಿ ಘೋಷಣೆ ಮಾಡಿದರು.
ಶೇ.17ರಷ್ಟು 'ರಾಜ್ಯ ಸರ್ಕಾರಿ ನೌಕರ'ರ ಮೂಲ ವೇತನ ಹೆಚ್ಚಳ: ಹಾಗಾದ್ರೇ ನಿಮಗೆ ಎಷ್ಟು ಸಿಗಲಿದೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಅದರಂತೆ ನಿಮ್ಮ ಮೂಲ ವೇತನ, ಪ್ರಸ್ತುತ ತುಟ್ಟಿ ಭತ್ಯೆ ಸೇರಿ ಶೇ.17ರಷ್ಟು ಮಧ್ಯಂತರ ಪರಿಹಾರ ಸೇರಿದರೇ ವೇತನ ಎಷ್ಟು ಸಿಗಲಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಏಪ್ರಿಲ್ 2023ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ತಿಳಿಸಿದ್ದಾರೆ.
ಮಧ್ಯಂತರ ಪರಿಹಾರದ ಉದ್ದೇಶಕ್ಕಾಗಿ ಮೂಲ ವೇತನ ಎಂದರು ಸ್ರಕಾರಿ ನೌಕರರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ದಿನಾಂಕ 01-04-2023ರಿಂದ ಜಾರಿಗೆ ಬರುವಂತೆ ಮೂಲ ನಿವೃತ್ತಿ ವೇತನ, ಕುಟುಂಬ ನಿವೃತ್ತಿ ವೇತನ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ ಎಂದಿದ್ದಾರೆ.
ಇದಲ್ಲದೇ ಸರ್ಕಾರದ ಸ್ಥಳೀಯ ಸಂಸ್ಥೆಗಳ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶವು ಅನ್ವಯಿಸುತ್ತದೆ ಎಂದಿದ್ದಾರೆ.
ಯುಜಿಸಿ, ಎಐಸಿಇಟಿ, ಐಸಿಎಆರ್, ಎನ್ ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ, ಪಿಂಚಣಿದಾರರಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.