ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಗುಡ್ ನ್ಯೂಸ್ : `ಹಳೆ ಪಿಂಚಣಿ ಯೋಜನೆ' ಜಾರಿಗೆ ಕ್ರಮ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, 2006ಕ್ಕೂ ಮುನ್ನ ನೇಮಕವಾಗಿ, 2006 ರ ನಂತರ ಕರ್ತವ್ಯಕ್ಕೆ ಹಾಜರಾಗಿದ್ದರೆ ಅಂತಹ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಆಯನೂರು ಮಂಜುನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, 2006 ರ ಏಪ್ರಿಲ್ 1 ರಿಂದ ಆಯ್ಕೆಯಾದ ಎಲ್ಲ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ ಕಡ್ಡಾಯ ಜಾರಿಗೊಳಿಸಲಾಗಿದೆ. 2006 ಕ್ಕೆ ಮುನ್ನ ನೇಮಕವಾಗಿರುವ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಮತ್ತು 2000 ನಂತರ ನೇಮಕವಾಗಿರುವವರಿಗೆ ಹೊಸ ಪಿಂಚಣಿ ನೀಡಲಾಗುತ್ತಿದೆ. 2006 ಕ್ಕೂ ಮುನ್ನ ನೇಮಕವಾದವರಿಗೆ ಪಿಂಚಣಿ ವ್ಯವಸ್ಥೆಯಲ್ಲಿ ತಾರತಮ್ಯವಾಗಿದ್ದರೆ ಸರಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಸ್ವಾಯತ್ತ ಸಂಸ್ಥೆಗಳು, ನಿಗಮ ಮಂಡಳಿಗಳು, ಸಂಘಗಳು, ವಿಶ್ವವಿದ್ಯಾಲಯಗಳು, ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಗಳಿಗೂ ತಮ್ಮ ಸ್ವಂತ ಸಂಪನ್ಮೂಲದಿಂದ ಭರಸಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲು ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.