ರಾಜ್ಯಕ್ಕೆ ಅಮಿತ್ ಶಾ ಬರ್ತಿದ್ದಾರೆ ಅಂತ ಒಂದು ದಿನ ಮೊದಲೇ ಅಧಿವೇಶನ ಮೊಟಕುಗೊಳಿಸಿದ ಬಿಜೆಪಿ: ಸಿದ್ದರಾಮಯ್ಯ ವಾಗ್ದಾಳಿ

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಿಲ್ಲ. ಅಮಿತ್ ಶಾ ಸಲುವಾಗಿ ಒಂದು ದಿನ ಮೊದಲೇ ಅಧಿವೇಶನ ಮೊಟಕುಗೊಳಿಸುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಸುವರ್ಣವಿಧಾನಸೌದದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರಕ್ಕೆ ಅಧಿವೇಶನ ನಡೆಸುವ ಮನಸ್ಸಿಲ್ಲ.
ಅಮಿತ್ ಶಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಒಬ್ಬರು ಭಾಗವಹಿಸಿ ಎಲ್ಲರಿಗೂ ಅಧಿವೇಶನದಲ್ಲಿ ಇರುವಂತೆ ಸಚಿವರಿಗೆ, ಶಾಸಕರಿಗೆ ಸೂಚನೆ ಕೊಡಬೇಕು. ಆದರೆ, ಮುಖ್ಯಮಂತ್ರಿಗೆ ಅಧಿವೇಶನ ನಡೆಸಲು ಆಸಕ್ತಿ ಇಲ್ಲ ಎಂದು ಟೀಕಿಸಿದರು.