ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ ಭೇಟಿ : ಫೆ. 27 ರಂದು ಬೆಳಗಾವಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ ಭೇಟಿ : ಫೆ. 27 ರಂದು ಬೆಳಗಾವಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಫೆ. 27 ರಂದು ಬೆಳಗಾವಿ ನಗರದಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಮಾರುತಿ ಜಿರಲಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ. 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿಗೆ ಆಗಮಿಸಲಿದ್ದು, ಅಂದು ಮಧ್ಯಾಹ್ನ 2 ಗಂಟೆಗೆ ಕೇಂದ್ರ ಸರ್ಕಾರದಿಂದ ಮೇಲ್ದರ್ಜೆಗೊಂಡಿರುವ ಬೆಳಗಾವಿ ರೈಲು ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಫೆ. 27 ರಂದೇ ರೈತ ಸಮ್ಮಾನ್ ಕಿಸಾನ್ ಯೋಜನೆಯಲ್ಲಿ ರೈತರ ಕಂತು ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಸುಮಾರು 2 ರಿಂದ 3 ಲಕ್ಷ ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆ ಎಂದು ಮಾಹಿತಿ ನೀಡಿದ್ದಾರೆ.