ರಾಜ್ಯಕ್ಕೆ ಹಿಂಗಾರು ಆಗಮನ : ನ.3 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಶುರು

ರಾಜ್ಯಕ್ಕೆ ಹಿಂಗಾರು ಆಗಮನ : ನ.3 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಶುರು

ಬೆಂಗಳೂರು: ಈಶಾನ್ಯ ಮಾನ್ಸೂನ್ (ಹಿಂಗಾರು ಮಳೆ ) ರಾಜ್ಯಕ್ಕೆ ಅಧಿಕೃತವಾಗಿ ಆಗಮನವಾಗಿದ್ದು, ನವೆಂಬರ್ 3 ರಿಂದ ರಾಜ್ಯಾದ್ಯಂತ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

.ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆಯು ಮಾಹಿತಿ ನೀಡಿದ್ದು, ನವೆಂಬರ್ 3ರಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಕೊಡಗು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ನವೆಂಬರ್ 3ರಿಂದ ಚಾಮರಾಜನಗರ, ಕೋಲಾರ, ತುಮಕೂರು, ರಾಮನಗರ, ಬೆಂಗಳೂರು ಸಿಟಿ, ಗ್ರಾಮಾತಂರ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.