ರಾಜ್ಯಗಳ ನಡುವಿನ ವ್ಯಾಜ್ಯಕ್ಕೆ ಮಹಾರಾಷ್ಟ್ರ ಪ್ರಚೋದನೆ ನೀಡಬಾರದು: ಸಿಎಂ

ಬೆಂಗಳೂರು: ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯಕ್ಕೆ ಪ್ರಚೋದನೆ ನೀಡುವ ಕಾರ್ಯವನ್ನು ಮಹಾರಾಷ್ಟ್ರ ಸರ್ಕಾರದ ಸಿಎಂ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ಗಡಿ ಪ್ರಾಧಿಕಾರ ಅನುದಾನ ನೀಡಬೇಕೆನ್ನುವ ನಿರ್ಧಾರ ಕೈಗೊಳ್ಳಲಾಗಿದೆ. ಮಹಾರಾಷ್ಟ್ರದಲ್ಲಿ ದೊಡ್ಡ ಪ್ರಮಾಣದಲ್ಲಿರುವ ಕನ್ನಡಿಗರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ ನಾವು ಅದನ್ನು ಮಾಡುತ್ತೇವೆ ಎಂದು ತಿಳಿಸಿದ್ದಾರೆ.