ರಾಜ್ಯಗಳಲ್ಲಿ ಶಿಕ್ಷಕರ ಸಹಿ ಸಂಗ್ರಹ ಅಭಿಯಾನಕ್ಕೆ. ಗುರಿಕಾರ ಚಾಲನೆ

ರಾಜ್ಯಗಳಲ್ಲಿ ಶಿಕ್ಷಕರ ಸಹಿ ಸಂಗ್ರಹ ಅಭಿಯಾನಕ್ಕೆ. ಗುರಿಕಾರ ಚಾಲನೆ

 ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರಮುಖ ಬೇಡಿಕೆಗಳಾದ ನೂತನ ಪಿಂಚಣಿ ಯೋಜನೆ ರದ್ದು ಮಾಡಿ ಹಳೆ ಪಿಂಚಣಿ ಯೋಜನೆ ಜಾರಿಗೆ ತರುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಲು ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದು ಅಖಿಲ ಭಾರತ ಶಿಕ್ಷಕರ ಪೆಡರೇಷನ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ಆಗ್ರಹಿಸಿದ್ದಾರೆ....

ಧಾರವಾಡದಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಶಿಕ್ಷಕರ ಪೆಡರೇಷನ ನವದೆಹಲಿ ವತಿಯಿಂದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಯೋಗದಲ್ಲಿ  ರಾಷ್ಟ್ರಪತಿಗಳಿಗೆ ಹಾಗೂ ಪ್ರಧಾನ ಮಂತ್ರಿಗಳಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಶಿಕ್ಷಕರ ಪ್ರಮುಖ ಬೇಡಿಕೆಗಳಾದ ನೂತನ ಪಿಂಚಣಿ ಯೋಜನೆ ರದ್ದು ಮಾಡಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು ಕೇಂದ್ರ ಸರಕಾರದ ಮಾದರಿಯಲ್ಲಿ 7ನೆಯ ವೇತನ ಆಯೋಗ ಜಾರಿಗೊಳಿಸುವುದು ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಅರ್ಪಿಸುವ ಸಂಬಂಧ ದೇಶದ ಎಲ್ಲ ರಾಜ್ಯಗಳಲ್ಲಿ ಶಿಕ್ಷಕರ ಸಹಿ ಸಂಗ್ರಹ ಅಭಿಯಾನಕ್ಕೆ ಧಾಡವಾಡದಲ್ಲಿ ಚಾಲನೆ ನೀಡಿದರು. ಅಲ್ಲದೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ನಿರಂತರ ಹೋರಾಟ ಮಾಡಲಾಗುತ್ತಿದೆ. ಇನ್ನಾದರೂ ಸರ್ಕಾರ ನೂತನ ಪಿಂಚಣಿ ಯೋಜನೆ ರದ್ದು ಮಾಡಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಕೇಂದ್ರ ಸರಕಾರದ ಮಾದರಿಯಲ್ಲಿ 7ನೆಯ ವೇತನ ಆಯೋಗ ಜಾರಿಗೊಳಿಸುವುದರ ಮೂಲಕ ಶಿಕ್ಣಣದ ಮೂಲ ತಳಪಾಯ( ಪೌಂಡೇಶನ್) ಎಂದೆ ಕರೆಯಿಸಿಕೊಂಡಿರುವ ಪ್ರಾಥಮಿಕ ಶಾಲೆಯ ಗುಣ್ಣಮಟ್ಟವನ್ನು ಕಟ್ಟಿ ಬೆಳಸುವ ಪ್ರಾಥಮಿಕ ಶಿಕ್ಷಕರ ಹಿತಕಾಯಲು ಅವರ ಬೇಡಿಕೆಗಳ ಈಡೇರಿಕೆಗೆ ಗಮನಹರಿಸಬೇಕೆಂದು ಒತ್ತಾಯಿಸಿದರು.