ರಾಜ್ಯದ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಹಾನಿ ಹಿನ್ನಲೆ : ಪರಿಹಾರ ಕಾರ್ಯಕ್ಕಾಗಿ 191 ಕೋಟಿ ರೂ. ಅನುದಾನ ಬಿಡುಗಡೆ

ರಾಜ್ಯದ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಹಾನಿ ಹಿನ್ನಲೆ : ಪರಿಹಾರ ಕಾರ್ಯಕ್ಕಾಗಿ 191 ಕೋಟಿ ರೂ. ಅನುದಾನ ಬಿಡುಗಡೆ

ಬೆಂಗಳೂರು: ಕಳೆದ ಕೆಲ ದಿನಗಳಿಂದ ಯಡಬಿಡದೇ ಸುರಿಯುತ್ತಿರುವಂತ ಮಳೆಯಿಂದಾಗಿ  ಅನೇಕ ಜಿಲ್ಲೆಗಳಲ್ಲಿ ನೆರೆ, ಪ್ರವಾಹದ ಭೀತಿ ಉಂಟಾಗಿದೆ. ಅನೇಕ ಜನರು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಈ ಹಿನ್ನಲೆಯಲ್ಲಿ ಪರಿಹಾರ ಕಾಮಗಾರಿಯನ್ನು ತ್ವರಿತವಾಗಿ ಕೈಗೊಳ್ಳುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರದಿಂದ 191.50 ಕೋಟಿ ರೂ.

ಅನುದಾವನ್ನು ಬಿಡುಗಡೆ ಮಾಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ಸುರಿದ ಕುಂಭದ್ರೋಣ ಮಳೆಯಿಂದ ಉಂಟಾಗಿರುವ ಪ್ರವಾಹದ ಪರಿಹಾರ ಮತ್ತು ಮೂಲ ಸೌಲಭ್ಯ ಅಭಿವೃದ್ಧಿಗಾಗಿ ರಾಜ್ಯ ವಿಪತ್ತು ನಿಧಿನಿಯಿಂದ 191.50 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಒಟ್ಟು ಮೊತ್ತದಲ್ಲಿ ಮೂಲ ಸೌಲಭ್ಯ ಕಲ್ಪಿಸಲು 124.50 ಕೋಟಿ ರೂ. ಹಾಗೂ ಇತರೆ ವೆಚ್ಚಗಳಿಗೆ 67 ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದು ತಿಳಿಸಿದ್ದಾರೆ.ಡಲಾಗಿದೆ.ಜಿಲ್ಲಾವಾರು ಎಲ್ಲೆಲ್ಲಿ ಹೆಚ್ಚು ಹಾನಿಯಾಗಿದೆ ಎನ್ನುವ ಮಾಹಿತಿ ಸರ್ಕಾರದ ಬಳಿ ಇದೆ. ತುರ್ತು ವರದಿ ಬಂದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯಿಂದ ನೆರೆ, ಪ್ರವಾಹದಿಂದ ಹಾನಿಯಾದ ಪ್ರದೇಶಕ್ಕೆ ಹಣ ಬಿಡುಗಡೆ ಮಾಡಲಾಗಿದೆ. ಬೆಳಗಾವಿ, ಹಾಸನಕ್ಕೆ ತಲಾ 10 ಕೋಟಿ ರೂ. ಉತ್ತರ ಕನ್ನಡ, ಹಾವೇರಿ, ಚಾಮರಾಜನಗರಕ್ಕೆ ತಲಾ 8 ಕೋಟಿ ರೂ. ಬೆಳ್ಳಾರಿ ಜಿಲ್ಲೆಗೆ 30 ಲಕ್ಷ ರೂ. ದಾವಣಗೆರೆ ಜಿಲ್ಲೆಗೆ 73 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.