ರಾಜ್ಯದ 5.86 ಲಕ್ಷ ವಿಶೇಷಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ: ಸುಧಾಕರ್‌

ರಾಜ್ಯದ 5.86 ಲಕ್ಷ ವಿಶೇಷಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ: ಸುಧಾಕರ್‌

ಬೆಂಗಳೂರು: ರಾಜ್ಯದಲ್ಲಿ ಈವರೆಗೆ 5.86 ಲಕ್ಷ ವಿಶೇಷಚೇತನರಿಗೆ ಕಾರ್ಡ್ ವಿತರಣೆ ಮಾಡಲಾಗಿದೆ ಎಂದು ಸಚಿವ ಸುಧಾಕರ್‌ ಹೇಳಿದರು. ಯುಡಿಐಡಿ ಕಾರ್ಡ್ ವಿತರಣೆ ಪ್ರಕ್ರಿಯೆಯ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ವಿಕಲಚೇತನರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ, ವಿಶೇಷಚೇತನರಿಗೆ ನೀಡುವ ಯುನಿವರ್ಸಲ್‌‌‌ ಗುರುತು ಚೀಟಿ-ಯುಡಿಐಡಿಯಲ್ಲಿ ಕರ್ನಾಟಕದ ಸಾಧನೆ ಉತ್ತಮ. ರಾಮನಗರದಲ್ಲಿ ಅತೀ ಹೆಚ್ಚು ಕಾರ್ಡ್‌ಗಳು ವಿತರಣೆಯಾಗಿವೆ ಎಂದು ತಿಳಿಸಿದ್ದಾರೆ.