ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಲಬುರಗಿಯಲ್ಲಿ ಗುರುವಾರ ದಾಖಲೆಯ 41.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಇದು ಈ ಬಾರಿಯ ಬೇಸಿಗೆಯಲ್ಲಿ ರಾಜ್ಯದಲ್ಲಿ ದಾಖಲಾದ ಅತಿ ಹೆಚ್ಚು ಉಷ್ಣಾಂಶವಾಗಿದೆ. ರಾಯಚೂರಿನಲ್ಲಿ ತಾಪಮಾನ 40 ಡಿಗ್ರಿ ಗೇರಿದೆ.
ಮಳೆ ವಾತಾರಣ ಉಂಟಾದ ಹಿನ್ನೆಲೆಯಲ್ಲಿ ಒಂದೆರಡು ದಿನ ಉಷ್ಣಾಂಶದಲ್ಲಿ ಇಳಿಕೆಯಾಗಿತ್ತು. ಇದೀಗ ಮತ್ತೆ ಉಷ್ಣಾಂಶದಲ್ಲಿ ಏರಿಕೆಯಾಗಿದ್ದು, ಗುರುವಾರ ಈವರೆಗಿನ ಬೇಸಿಗೆಯ ಅತಿಹೆಚ್ಚು ಉಷ್ಣಾಂಶ ದಾಖಲಾಗಿದೆ. ಕಳೆದ ಏಪ್ರಿಲ್ 5 ರಿಂದ ಏ.11 ರ ಅವಧಿಯಲ್ಲಿ ಒಟ್ಟು 6 ದಿನ 40 ಡಿಗ್ರಿಗೂ ಅಧಿಕ ಗರಿಷ್ಠ ಉಷ್ಣಾಂಶ ದಾಖಲಾಗಿದೆ.