ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ʻ24X7 ಸಹಾಯವಾಣಿʼ ಆರಂಭ, ಹಗಲು-ರಾತ್ರಿ ಸೇವೆ: ಸಚಿವ ಸುಧಾಕರ್

ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಸಂಬಂಧಿಸಿದ ತಾಯಿ-ಮಗು ಸಾವಿನ ಪ್ರಕರಣ ಮತ್ತೆ ಮರುಕಳಿಸದಂತೆ ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ 24X7 ಸಹಾಯವಾಣಿ ತೆರೆಯುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ.
ತುಮಕೂರಿನ ಜಿಲಲಾಸ್ಪತ್ರೆ ಸಬಾಂಗಣದಲ್ಲಿ ಬುಧವಾರ ವೈದ್ಯರೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಬೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಯಿಂದ ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಸಾರ್ವಜನಿಕರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.
ಈ ಸಹಾಯವಾಣಿಗೆ ಸಾಮಾಜಿಕ ಭದ್ರತೆ ಇರುವಂತಹ 4 ಸಿಬ್ಬಂದಿಯನ್ನು ನೇಮಿಸಿಕೊಳ್ಳಿ. ಈ ಸಹಾಯವಾಣಿ ದಿನದ 24 ಗಂಟೆ ಕರ್ತವ್ಯ ನಿರ್ವಹಿಸುವಂತೆ ನೋಡಿಕೊ‍್ಳಿ. ಹಗಲು ಪಾಳಿಯಲ್ಲಿ ಇಬ್ಬರು ಮತ್ತು ರಾತ್ರಿ ಪಾಳಿಯಲ್ಲಿ ಇಬ್ಬರು ಕೆಲಸ ನಿರ್ವಹಿಸಲಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ 438 ನಮ್ಮ ಕ್ಲಿನಿಕ್‌ಗಳನ್ನು ನಿರ್ಮಿಸಲಾಗುತ್ತಿದ್ದು, 288 ಸಿದ್ಧವಾಗಿದೆ. ಇದೇ ತಿಂಗಳು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಮೊದಲಿಗೆ 200 ಕ್ಕೂ ಹೆಚ್ಚು ಕ್ಲಿನಿಕ್ ಆರಂಭವಾಗಲಿವೆ. ತುಮಕೂರಿನಲ್ಲಿ ಒಟ್ಟು 10 ಕ್ಲಿನಿಕ್ ಆರಂಭವಾಗಲಿವೆ. ಮಹಿಳೆಯರ ಕ್ಲಿನಿಕ್‌ಗೆ ʼಆಯುಷ್ಮತಿ ಕ್ಲಿನಿಕ್ʼ ಎಂದು ಹೆಸರಿಡಲಾಗಿದೆ ಎಂದರು.