ರಾಜ್ಯದ ಕಾಲೇಜುಗಳಲ್ಲಿ 10 ಲಕ್ಷ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ : ಕಾಂಗ್ರೆಸ್ ಘೋಷಣೆ

ರಾಜ್ಯದ ಕಾಲೇಜುಗಳಲ್ಲಿ 10 ಲಕ್ಷ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ : ಕಾಂಗ್ರೆಸ್ ಘೋಷಣೆ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿನ 10 ಲಕ್ಷ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ನಡೆದ `ನಾ ನಾಯಕಿ' ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿನ 10 ಲಕ್ಷ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ, 26 ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ 24 ಮಹಿಳಾ ವಸತಿ ನಿಲಯಗಳ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನರೇಗಾ ಯೋಜನೆಯನ್ನು ಜಾರಿಗೊಳಿಸಿ, ಅದರಡಿ ಕೆಲಸ ಮಾಡುವ ಕಾರ್ಮಿಕರ ಪ್ರಮಾಣದಲ್ಲಿ ಸೇ. 44 ರಷ್ಟು ಮಹಿಳೆಯರಿಗೆ ಅವಕಾಶ, 1993 ರಲ್ಲಿ ಮಹಿಳೆಯರ ಆರ್ಥಿಕ ಚೈತನ್ಯ ವೃದ್ಧಿಗಾಗಿ ರಾಷ್ಟ್ರೀಯ ಮಹಿಳಾ ಕೋಶ ರಚನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಟಿಕಾಂಶಯುಕ್ತ ಬಿಸಿಯೂಟ, ಸ್ತ್ರೀಶಕ್ತಿ ಸಂಘಗಳ ಆವರ್ತಕ ನಿಧಿಯನ್ನು 5000 ರೂ.ನಿಮದ 25,000 ರೂ.ಗೆ ಏರಿಸಲಾಗುವುದು ಎಂದು ತಿಳಿಸಿದ್ದಾರೆ.