ರಾಜ್ಯದ ಕೈದಿಗಳ ವೇತನ 650 ರೂ.ಗೆ ಹೆಚ್ಚಳ : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ರಾಜ್ಯದ ಕೈದಿಗಳ ವೇತನ 650 ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಅಧಿವೇಶದ ಹಿನ್ನೆಲೆ ಬೆಳಗಾವಿಯಲ್ಲಿರುವ ಹಿಂಡಲಗಾ ಜೈಲಿಗೆ ಗೃಹಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿಯಲ್ಲಿರುವ ಹಿಂಡಲಗಾ ಜೈಲಿಗೆ ಗೃಹಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸಾವರ್ಕರ್ ಫೋಟೋವನ್ನು ಅನಾವರಣಗೊಳಿಸಿದ್ದಾರೆ. ಸಾವರ್ಕರ್ ಫೋಟೋವನ್ನು ಅನಾವರಣಗೊಳಿಸಿದ ಆರಗ ಜ್ಞಾನೇಂದ್ರ , ಬಿಸಿ ನಾನಾಗೇಶ್ , ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಉಪಸ್ಥಿತಿಯಲ್ಲಿ ಸಾವರ್ಕರ್ ಫೋಟೋವನ್ನು ಅನಾವರಣಗೊಳಿಸಿದ್ದಾರೆ.