ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ : ಸದ್ಯಕ್ಕೆ 'ವಿದ್ಯುತ್' ದರ ಹೆಚ್ಚಳ ಇಲ್ಲ

ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ : ಸದ್ಯಕ್ಕೆ 'ವಿದ್ಯುತ್' ದರ ಹೆಚ್ಚಳ ಇಲ್ಲ

ಬೆಂಗಳೂರು: ಕಳೆದ ಹಲವು ದಿನಗಳಿಂದ ಬೆಲೆ ಏರಿಕೆಗೆ ತತ್ತರಿಸಿದ್ದ ಜನರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿತ್ತು. ವಿದ್ಯುತ್ ದರದಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಇದೀಗ ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ ಮೂಲಕ ರಾಜ್ಯದ ಜನರಿಗೆ ಸದ್ಯಕ್ಕೆ ಬಿಗ್ ರಿಲೀಫ್ ಕೊಟ್ಟಿದ್ದಾರೆ.ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ದರ ಏರಿಕೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ನಾಗರಾಜ್ ಯಾದವ್ ವಿಷಯ ಪ್ರಸ್ತಾಪ ಮಾಡಿದ್ದರು. ಸರ್ಕಾರ ಜನರಿಗೆ ವಿದ್ಯುತ್ ಬರೆ ಹಾಕಲು ಹೊರಟಿದೆ. ಮಾಧ್ಯಮಗಳಲ್ಲಿ ವಿದ್ಯುತ್ ದರ ಏರಿಕೆ ಅಂತ ಸುದ್ದಿ ಬರುತ್ತಿದೆ. ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡದಂತೆ ಒತ್ತಾಯ ಮಾಡಿದರು.

ಇದಕ್ಕೆ ಉತ್ತರ ನೀಡಿದ ಇಂಧನ ಸಚಿವ ಸುನಿಲ್ ಕುಮಾರ್, ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಇಲ್ಲ. ಸರ್ಕಾರದ ಮುಂದೆ ವಿದ್ಯುತ್ ಬೆಲೆ ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದರು. ಸದ್ಯಕ್ಕೆ ದರ ಏರಿಕೆ ಬಗ್ಗೆ ಯಾವುದೇ ಯೋಚನೆಯೂ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಫೆ. 13 ರಿಂದ ಮಾರ್ಚ್ 1 ರವರೆಗೆ ಸಾರ್ವಜನಿಕ ಆದಾಲತ್ ನಡೆಸಲಿದ್ದು, ಮತ್ತೆ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳು ವಿದ್ಯುತ್ ದರ ಪರಿಷ್ಕರಣೆ ಕೋರಿರುವ ಹಿನ್ನೆಲೆ 'ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ' ಫೆ. 13 ರಿಂದ ಮಾರ್ಚ್ 1 ರವರೆಗೆ ರವರೆಗೆ ಸಾರ್ವಜನಿಕ ಆದಾಲತ್ ನಡೆಸಲಿದ್ದು, ಮತ್ತೆ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು.ಎಸ್ಕಾಮ್ ಗಳು ಪ್ರತಿ ಯುನಿಟ್ ಗೆ ಒಂದೂವರೆ ರೂ. 2 ರೂ.ವರೆಗೆ ವಿದ್ಯುತ್ ದರ ಏರಿಕೆ ಕೋರಿ ಈಗಾಗಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಸಲಹೆ ಸೂಚನೆಗಳನ್ನು ಪರಿಗಣಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ವಿದ್ಯುತ್ ದರ ಏರಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಲಾಗಿತ್ತು.