ರಾಜ್ಯದ ಜನತೆಗೆ ಬಿಗ್ ಶಾಕ್ : ಮತ್ತೆ 'ವಿದ್ಯುತ್ ದರ' ಹೆಚ್ಚಳ ಸಾಧ್ಯತೆ..

ಬೆಂಗಳೂರು : ರಾಜ್ಯದ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ಮತ್ತೆ 'ವಿದ್ಯುತ್ ದರ' ( Electric Bill) ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೌದು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಫೆ.
ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳು ವಿದ್ಯುತ್ ದರ ಪರಿಷ್ಕರಣೆ ಕೋರಿರುವ ಹಿನ್ನೆಲೆ 'ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ' ಫೆ. 13 ರಿಂದ ಮಾರ್ಚ್ 1 ರವರೆಗೆ ರವರೆಗೆ ಸಾರ್ವಜನಿಕ ಆದಾಲತ್ ನಡೆಸಲಿದ್ದು, ಮತ್ತೆ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಎಸ್ಕಾಮ್ಗಳು ಪ್ರತಿ ಯುನಿಟ್ ಗೆ ಒಂದೂವರೆ ರೂ. 2 ರೂ.ವರೆಗೆ ವಿದ್ಯುತ್ ದರ ಏರಿಕೆ ಕೋರಿ ಈಗಾಗಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಸಲಹೆ ಸೂಚನೆಗಳನ್ನು ಪರಿಗಣಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ವಿದ್ಯುತ್ ದರ ಏರಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಇದರಿಂದ ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ದರ ಹೆಚ್ಚಳವಾಗಲಿದೆಯಾ ಎಂಬ ಆತಂಕ ಶುರುವಾಗಿದೆ.