ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಸ್ಪೀಡ್ ಪೋಸ್ಟ್ ಮೂಲಕ `ಮನೆ ಬಾಗಿಲಿಗೇ ಜನನ, ಮರಣ ಪ್ರಮಾಣ ಪತ್ರ'!

ಬೆಂಗಳೂರು : ರಾಜ್ಯದ ಜನತೆಗೆ ಅಂಚೆ ಇಲಾಖೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಮನೆಬಾಗಿಲಿಗೇ ಜನನ, ಮರಣ ಪತ್ರಗಳು ಬರಲಿವೆ. ಈ ಸಂಬಂಧ ಕಂದಾಯ ಇಲಾಖೆಯು ಅಂಚೆ ಇಲಾಖೆ ಜೊತೆಗೆ ಒಪ್ಪಂದ ಮಾಡಿಕೊಂಡಿ
ಹೌದು, ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಮನೆ ಬಾಗಿಲಿಗೆ ಪ್ರಮಾಣ ಪತ್ರ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆಯಲ್ಲಿ ಅಂಚೆ ಇಲಾಖೆಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ. ಹೀಗಾಗಿ ಇನ್ಮುಂದೆ ಸಾರ್ವಜನಿಕರು ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗಾಗಿ ನಾಡಕಚೇರಿ ಹಾಗೂ ಆಸ್ಪತ್ರೆಗಳಿಗೆ ಅಲೆದಾಡಬೇಕಾಗಿಲ್ಲ. ಈ ಪ್ರಮಾಣ ಪತ್ರಗಳು ಸ್ಪೀಡ್ ಪೋಸ್ಟ್ ನಲ್ಲಿ ಮನೆ ಬಾಗಿಲಿಗೆ ಬರಲಿವೆ.
ಜನನ ಮತ್ತುರಣ ಪ್ರಮಾಣ ಪತ್ರಗಳಿಗೆ ಅರ್ಜಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಪ್ರಮಾಣ ಪತ್ರಗಳು ಸಿದ್ದವಾಗುತ್ತವೆ. ಹೀಗೆ ತಯಾರಾದ ಪ್ರಮಾಣ ಪತ್ರಗಳನ್ನು ಆಯಾ ಸಂಬಂಧಪಟ್ಟ ನಾಡ ಕಚೇರಿ, ತಾಲೂಕು ಕಚೇರಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಿಗೆ ಅಂಚೆ ಸಿಬ್ಬಂದಿಯೇ ತೆರಳಿ, ಅವುಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ತಲುಪಿಸಲಿದ್ದಾರೆ.