ರಾಜ್ಯದ ಪೊಲೀಸರಿಗೆ ಭರ್ಜರಿ ಗುಡ್ ನ್ಯೂಸ್ : 2023ನೇ ಸಾಲಿನ ಗಳಿಕೆ ರಜೆ ನಗಧೀಕರಣಕ್ಕೆ ಅನುಮತಿ
ಬೆಂಗಳೂರು: 2023ನೇ ಸಾಲಿನ ಬ್ಲಾಕ್ ಅವಧಿಯಲ್ಲಿ ರಾಜ್ಯ ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಗರಿಷ್ಟ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ಆಧ್ಯರ್ಪಿಸಿ ರಜಾ ವೇತನಕ್ಕೆ ಸಮನಾದ ನಗದೀಕರಣಕ್ಕೆ ಅನುಮತಿಸಿ ಆದೇಶಿಸಲಾಗಿದೆ
ಈ ಸಂಬಂಧ ಎಡಿಜಿಪಿ ಹಿಂಬರದಲ್ಲಿ ಮಾಹಿತಿ ಹಂಚಿಕೊಂಡಿದ್ದು, 2023ನೇ ಸಾಲಿನ ಬ್ಲಾಕ್ ಅವಧಿಗೆ ಗಳಿಕೆ ರಜೆಯನ್ನು ಆಧ್ಯರ್ಪಿಸಿ ನಗಧೀಕರಣ ಪಡೆಯುವ ಸೌಲಭ್ಯವನ್ನು ನಿಯತಗೊಳಿಸಲಾಗಿದೆ ಎಂದಿದ್ದಾರೆ.
ದಿನಾಂಕ 17-12-2022ರಂದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿರುವಂತ ನಡಾವಳಿಯಂತೆ ಎಲ್ಲಾ ವೃಂದದ ಅರ್ಹ ಅಧಿಕಾರಿ, ನೌಕರರು ಒಂದು ತಿಂಗಳ ಮುಂಚಿತ ನೋಟಿಸ್ ನೀಡಿ, ದಿನಾಂಕ 01-01-2023 ರಿಂದ 31-12-2023ರವರೆಗಿನ ಅವಧಿಯಲ್ಲಿ ಅವರ ಇಚ್ಛೆಯಂತೆ ಯಾವುದೇ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣದ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದೆ.
ಇನ್ನೂ ಗೆಜೆಟ್ ಅಧಿಕಾರಿಗಳ ಸಂಬಂಧದಲ್ಲಿ 2023ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ, ಹೆಚ್ ಆರ್ ಎಂ ಎಸ್ ನಲ್ಲಿ ಲಭ್ಯವಿರುವ ಅಧಿಕಾರಿಗಳ ಗಳಿಕೆ ರಜೆ ಲೆಕ್ಕಾಚಾರದ ಆಧಾರದ ಮೇಲೆ ನಗದೀಕರಣವನ್ನು ಮಂಜೂರು ಮಾಡಲು ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಗಳು ಕ್ರಮವಹಿಸುವಂತೆ ಹೇಳಲಾಗಿದೆ.