ರಾಜ್ಯದ ಪ್ರೌಢಶಾಲೆ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ಗೌರವ ಸಂಭಾವನೆಗೆ ಅನುದಾನ ಬಿಡುಗಡೆ

ಬೆಂಗಳೂರು : 2022-23 ಸಾಲಿಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರ ಸಂಭಾವನೆಗಾಗಿ ಅನುದಾನ ಬಿಡುಗಡೆ ಮಾಡಲಾಗಿದೆ.
ರಾಜ್ಯದ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ತೆರವಾಗಿರುವ ಶಿಕ್ಷಕರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಬಾವನೆಗಾಗಿ, 1468.36 ಲಕ್ಷಗಳನ್ನು ಬಿಡುಗಡೆಗೊಳಿಸಲು ಪ್ರಸ್ತಾವಿಸಿದೆ
ಪ್ರಸ್ತಾವನೆಯನ್ನು ಪರಿಶೀಲಿಸಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ ಅಗತ್ಯವಿರುವ ರೂ.1468 36ಲಕ್ಷಗಳನ್ನು ರೂ,1387.27ಲಕ್ಷಗಳು ಮತ್ತು ಲೆ ರೂ.81.09 ಲಕ್ಷಗಳು ಲಭ್ಯವಿರುವ ಅನುದಾನದಿಂದ ಬಿಡುಗಡೆಗೊಳಿಸಲು ನಿರ್ಣಯಿಸಿ ಈ ಕೆಳಕಂಡಂತೆ ಆದೇಶಿಸಲಾಗಿದೆ.