ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ಶೀಘ್ರವೇ ಗೃಹಿಣಿ ಶಕ್ತಿ ಯೋಜನೆ ಜಾರಿ, ಪ್ರತಿ ತಿಂಗಳು ಸಿಗಲಿದೆ 500 ರೂ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ಶೀಘ್ರವೇ ಗೃಹಿಣಿ ಶಕ್ತಿ ಯೋಜನೆ ಜಾರಿ, ಪ್ರತಿ ತಿಂಗಳು ಸಿಗಲಿದೆ 500 ರೂ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚಿಗೆ ಮಂಡಿಸಿದಂತ ರಾಜ್ಯ ಬಜೆಟ್ ನಲ್ಲಿ ಹೊಸದಾಗಿ ಗೃಹಿಣಿ ಶಕ್ತಿ ಯೋಜನೆಯನ್ನು ಘೋಷಣೆ ಮಾಡಿದ್ದರು. ಮಹಿಳೆಯರು ಮತ್ತು ಮಕ್ಕಳ ಸಮಗ್ರ ಶ್ರೇಯೋಭಿವೃದ್ಧಿಗಾಗಿ ಘೋಷಿಸಿದ್ದ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸಲಾಗುತ್ತಿದೆ.

ಈ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 500 ರೂ ಸಿಗಲಿದೆ.

ಈ ಕುರಿತಂತೆ ಸದನದಲ್ಲಿ ಸದಸ್ಯರೊಬ್ಬರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್, ಬಜೆಟ್ ನಲ್ಲಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು 500 ರೂ ಪ್ರೋತ್ಸಾಹ ಧನ ನೀಡುವಂತ ಗೃಹಿಣಿ ಶಕ್ತಿ ಯೋಜನೆಯನ್ನು ಘೋಷಣೆ ಮಾಡಲಾಗಿತ್ತು. ಈ ಬಜೆಟ್ ಗೆ ಅನುಮೋದನೆ ಸಿಕ್ಕ ತಕ್ಷಣವೇ ಶೀಘ್ರವೇ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದರು.

ಈ ಬಾರಿ ಒಂದು ಲಕ್ಷ ಮಹಿಳೆಯರಿಗೆ ಗೃಹ ಆಧಾರಿತ ಉದ್ಯಮ ನಡೆಸೋದಕ್ಕೆ ಕೌಶಲ್ಯ ಅಭಿವೃದ್ಧಿಯ ತರಬೇತಿಯ ಯೋಜನೆ ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಮಹಿಳೆಯರು ಸ್ವಾವಲಂಬನೆ ಸಾಧಿಸೋ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಇನ್ನೂ ಗುಡ್ಡಗಾಡು ಪ್ರದೇಶಗಳಲ್ಲಿ ಗರ್ಭಿಣಿ ಮಹಿಳೆಯರು ಅಂಗನವಾಡಿಗೆ ತೆರಳೋದಕ್ಕೆ ಕಷ್ಟವಾಗಲಿದೆ. ಹೀಗಾಗಿ ರಾಜ್ಯದ ಆರು ಜಿಲ್ಲೆಗಳ ಗರ್ಭಿಣಿ ಮಹಿಳೆಯರಿಗೆ ಮಾತೃಪೂರ್ಣ ಯೋಜನೆಯಡಿ ಫಲಾನುಭವಿಗಳ ಮನೆಗೆ ಆಹಾರ ಧಾನ್ಯಗಳನ್ನು ತೆಗೆದುಕೊಂಡು ಹೋಗಿ ತಲುಪಿಸೋ ವ್ಯವಸ್ಥೆ ಮಾಡಲಾಗಿದೆ ಎಂದರು.