ರಾಜ್ಯದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಶೀಘ್ರವೇ ಡೀಸೆಲ್ ಸಬ್ಸಿಡಿ ನೀಡುವ `ರೈತ ಶಕ್ತಿ' ಯೋಜನೆಗೆ ಚಾಲನೆ

ರಾಜ್ಯದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಶೀಘ್ರವೇ ಡೀಸೆಲ್ ಸಬ್ಸಿಡಿ ನೀಡುವ `ರೈತ ಶಕ್ತಿ' ಯೋಜನೆಗೆ ಚಾಲನೆ

ಬೆಂಗಳೂರು : ರೈತಾಪಿ ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ' ರೈತ ಶಕ್ತಿ ಯೋಜನೆ' ಈ ತಿಂಗಳಾಂತ್ಯಕ್ಕೆ ಸಿಎಂ ಚಾಲನೆ‌ ನೀಡಲಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು, ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ ಇಂಧನದ ಮೇಲೆ ಬಹುತೇಕ‌ ಅವಲಂಬಿತವಾಗಿದೆ.

ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 23 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ' ರೈತ ಶಕ್ತಿ ಯೋಜನೆ ಕೃಷಿ ಉತ್ಪಾದಕತೆಯನ್ನು ಹೆಚ್ಚಿ ಸುವಲ್ಲಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನದ ವೆಚ್ಚದ ಹೊರೆಯನ್ನು ಕಡಿಮೆ ಮಾಡಲು ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ಈ 'ರೈತ ಶಕ್ತಿ ಯೋಜನೆ' ಇದೇ ತಿಂಗಳಾಂತ್ಯಕ್ಕೆ ಜಾರಿಯಾಗಲಿದೆ ಎಂದರು.

ಪ್ರತಿ ಎಕರೆಗೆ ರೂ .250 / - ಗಳಂತೆ ಗರಿಷ್ಠ ಐದು ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್ ಗೆ ಸಹಾಯಧನವನ್ನು ನೀಡುವ ' ರೈತ ಶಕ್ತಿ ' ಯೋಜನೆಯನ್ನು ಈ ತಿಂಗಳಾಂತ್ಯಕ್ಕೆ ಅನುಷ್ಠಾನಗೊಳ್ಳುತ್ತಿದ್ದು,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುಮಾರು 45 ಲಕ್ಷಕ್ಕೂ ಹೆಚ್ಚಿನ ರೈತಾಪಿ ಕುಟುಂಬಗಳಿಗೆ ಡಿಬಿಟಿ ಮೂಲಕ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಬಿಡುಗಡೆ ಮಾಡಲಿದ್ದಾರೆ.ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ FRUITS ಫೋರ್ಟಲ್‌ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ . ಅದೇ ರೀತಿಯಲ್ಲಿ FRUITS ಪೋರ್ಟಲ್‌ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರಿಗೆ ರೈತ ಶಕ್ತಿ ಯೋಜನೆಯನ್ನು, ಸಹ ಕಿಸಾನ್ ತಂತ್ರಾಂಶ ಬಳಸಿಕೊಂಡು ನೇರ ವರ್ಗಾವಣೆ ( DBT ) ಮೂಲಕವೇ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.