ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ 7 ಗಂಟೆ ನಿರಂತರ 'ವಿದ್ಯುತ್' ಸರಬರಾಜು

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ 7 ಗಂಟೆ ನಿರಂತರ 'ವಿದ್ಯುತ್' ಸರಬರಾಜು

ಮೈಸೂರು : ರಾಜ್ಯದ ರೈತರಿಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ಕುಮಾರ್ ಗುಡ್ ನ್ಯೂಸ್ ನೀಡಿದ್ದು, ರೈತರಿಗೆ ಏಳು ಗಂಟೆ ನಿರಂತರ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಸಚಿವ ವಿ.ಸುನಿಲ್ಕುಮಾರ್ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ವಿದ್ಯುತ್ ಉತ್ಪಾದನೆಗಿಂತ ಬೇಡಿಕೆ ಹೆಚ್ಚಾಗಿದ್ದರೂ ಸರಬರಾಜು ಮಾಡುವ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸಲಾಗಿದೆ. ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲಾಗುತ್ತದೆ, ಲೋಡ್ ಶೆಡ್ಡಿಂಗ್ ಇಲ್ಲದಂತೆ ವಿದ್ಯುತ್ ಅನ್ನು ಯಶಸ್ವಿಯಾಗಿ ಪೂರೈಕೆ ಮಾಡಲಾಗುತ್ತಿದೆ ಎಂದರು.

ರೈತರಿಗೆ 7 ಗಂಟೆ ವಿದ್ಯುತ್ ಪೂರೈಸಲಾಗುತ್ತದೆ, ಇಲಾಖೆಯನ್ನು ಮತ್ತಷ್ಟುಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಈಗಾಗಲೇ ಬೆಳಕು ಯೋಜನೆ ಜಾರಿಗೆ ತರುವ ಮೂಲಕ ವಿದ್ಯುತ್ ಸಂಪರ್ಕ ಇಲ್ಲದ ಮನೆಗಳಿಗೆ ವಿದ್ಯುತ್ ನೀಡಲಾಗಿದೆ. ಎಸ್ಸಿ, ಎಸ್ಟಿಮನೆಗಳಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಈ ಕಾರ್ಯ ವೇಗವಾಗಿ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ರೈತರಿ ಯಾವುದೇ ಆತಂಕ ಇಲ್ಲ, ರೈತರಿಗೆ ಏಳು ಗಂಟೆ ನಿರಂತರ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಸಚಿವ ವಿ.ಸುನಿಲ್ಕುಮಾರ್ ತಿಳಿಸಿದರು.