ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸ್ಪೋಟ : ಒಂದೇ ಶಾಲೆಯ 28 ವಿದ್ಯಾರ್ಥಿಗಳಿಗೆ ಸೋಂಕು

ಧಾರವಾಡ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಧಾರವಾಡ ಜಿಲ್ಲೆಯ ಒಂದೇ ಶಾಲೆಯ 28 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕುಸಗಲ್ ಪ್ರೌಢಶಾಲೆಯ 28 ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಬಳ್ಳಾರಿ ಜಿಲ್ಲೆಯ ಕುರಗೋಡು ತಾಲೂಕಿನ ಯರಂಗನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ವಸತಿ ಶಾಲೆಯ 236 ವಿದ್ಯಾರ್ಥಿಗಳ ಪೈಕಿ 35 ವಿದ್ಯಾರ್ಥಿನಿಯರು, 11 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.