ರಾಜ್ಯದ ಶಾಲೆಗಳಲ್ಲಿ ಇನ್ಮುಂದೆ ಸಂವಿಧಾನ ದಿನ ಆಚರಿಸಲು ಆದೇಶ

ರಾಜ್ಯದ ಶಾಲೆಗಳಲ್ಲಿ ಇನ್ಮುಂದೆ ಸಂವಿಧಾನ ದಿನ ಆಚರಿಸಲು ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ನ.26ರಂದು ಸಂವಿಧಾನ ದಿನವನ್ನು ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಎಲ್ಲಾ ಶಾಲೆಗಳಲ್ಲಿ ನ.26ರಂದು ಬೆಳಗ್ಗೆ 11 ಗಂಟೆಗೆ ಏಕಕಾಲಕ್ಕೆ ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಶಾಲಾ ಆವರಣದಲ್ಲಿನ ಪ್ರಮುಖ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ, ಮೂಲಭೂತ ಕರ್ತವ್ಯಗಳ ಬಗ್ಗೆ ಚರ್ಚಾ ಸ್ಪರ್ಧೆ, ರಸಪ್ರಶ್ನೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದೆ.