ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ : `ಶಿಕ್ಷಕ ಮಿತ್ರ' ಪ್ರಸ್ತಾವನೆ ತ್ವರಿತ ಇತ್ಯರ್ಥಕ್ಕೆ ಸೂಚನೆ

ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ : `ಶಿಕ್ಷಕ ಮಿತ್ರ' ಪ್ರಸ್ತಾವನೆ ತ್ವರಿತ ಇತ್ಯರ್ಥಕ್ಕೆ ಸೂಚನೆ

ಬೆಂಗಳೂರು : ರಾಜ್ಯದ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಶಿಕ್ಷಕ ಮಿತ್ರ ತಂತ್ರಾಂಶದಲ್ಲಿ ಸಲ್ಲಿಕೆಯಾಗುವ ಪ್ರಸ್ತಾವನೆಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

ಕ್ಷಕರಿಗೆ ಶಿಕ್ಷಕ ಮಿತ್ರ ತಂತ್ರಾಂಶದ ಮೂಲಕ 17 ಸೇವಾ ಸೌಲಭ್ಯಗಳನ್ನು ಆನ್ಲೈನ್ ತಂತ್ರಾಂಶದ ಮೂಲಕ ಅನುಷ್ಟಾನಗೊಳಿಸಲಾಗಿದ್ದು, ಶಿಕ್ಷಕರ ಹಬ್ಬದ ಮುಂಗಡ, ರಜಾ ಸೌಲಭ್ಯಗಳು ಹಾಗೂ ವಿದೇಶ ಪ್ರವಾಸ ಮುಂತಾದ 17 ಸೇವಾ ಸೌಲಭ್ಯಗಳನ್ನು ಶಿಕ್ಷಕ ಮಿತ್ರ ತಂತ್ರಾಂಶದ ಮೂಲಕ ಅನುಷ್ಟಾನ ಮಾಡುತ್ತಿದ್ದು, ತ್ವರಿತಗತಿಯಲ್ಲಿ ಶಿಕ್ಷಕರಿಗೆ ಸೇವಾ ಸೌಲಭ್ಯ ನೀಡಲು ತಿಳಿಸಲಾಗಿದೆ.

ಎಲ್ಲ ಬಟವಾಡೆ ಅಧಿಕಾರಿಗಳು ಶಿಕ್ಷಕರಿಂದ ಸೇವಾ ಸೌಲಭ್ಯಗಳನ್ನು ಕೋರಿ ಆನ್ ಲೈನ್ ಮೂಲಕ ಸ್ವೀಕರಿಸಿದ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿ ಕಾಲಮಿತಿಯಲ್ಲಿ ಸೇವೆ ಒದಗಿಸುವುದು ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿಯಾಗಿದ್ದು, ಯಾವುದೇ ಕಾರಣಕ್ಕೂ ಅರ್ಜಿಗಳು ಬಾಕಿ ಉಳಿಯದಂತೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.