ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳು ಎಷ್ಟು ಗೊತ್ತಾ?
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇರೋದಾಗಿ ಅಚ್ಚರಿಯ ಮಾಹಿತಿಯನ್ನು ಸರ್ಕಾರ ನೀಡಿದೆ.
ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದು, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಟ್ಟು 48,355 ಶಿಕ್ಷಕರ ಹುದ್ದೆಗಳು ಖಾಲಿ ಇದ್ದಾವೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ, ಪ್ರಸ್ತುತ ಸಾಲಿನಲ್ಲಿ ಒಟ್ಟು 27,000 ಅತಿಥಿ ಶಿಕ್ಷಕರ ನೇಮಕವನ್ನು ಮಾಡಿಕೊಳ್ಳಲಾಗಿದೆ. 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದಿದ್ದಾರೆ.
ಇನ್ನೂ ಪ್ರಸ್ತುತ ಸಾಲಿನಲ್ಲಿ ರಾಜ್ಯದ ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಎದುರಾಗಿ ಒಟ್ಟು 5,909 ಅತಿಥಿ ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಖಾಲಿ ಇರುವ 2,500 ಹುದ್ದೆಗಳ ಭರ್ತಿಗೆ ಕೇಂದ್ರೀಕೃತ ದಾಖಲಾತಿ ಘಟಕಕ್ಕೆ ವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.