ರಾಜ್ಯದ ಹವಾಮಾನ ವರದಿ: 02-01-2023

ರಾಜ್ಯದ ಹವಾಮಾನ ವರದಿ: 02-01-2023

ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಸಿಲಿದ್ದರೂ ಚಳಿಯ ವಾತಾವರಣ ಮುಂದುವರಿಯಲಿದೆ. ಬೆಂಗಳೂರು ನಗರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಕೊಡುಗು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಶೀತಗಾಳಿ & ಚಳಿ ಹೆಚ್ಚಿರಲಿದೆ. ಬೆಂಗಳೂರಿನಲ್ಲಿಂದು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 23 ಡಿಗ್ರಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.