ರಾಜ್ಯದ ಹವಾಮಾನ ವರದಿ: 30-11-2022

ರಾಜ್ಯದ ಹವಾಮಾನ ವರದಿ: 30-11-2022

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂಜಾನೆ ಚಳಿ ಇರಲಿದೆ. ಮಧ್ಯಾಹ್ನ ಕೊಂಚ ಬಿಸಿಲು ಇರಲಿದ್ದು, ಸಂಜೆ ವೇಳೆಗೆ ಗಾಳಿ ಜೊತೆಗೆ ತಂಪಾದ ವಾತಾವರಣವಿರಲಿದೆ. ಕರಾವಳಿ ಸೇರಿದಂತೆ ಕೆಲ ಭಾಗಗಳಲ್ಲಿ ಸಣ್ಣ ಪ್ರಮಾಣದ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.