ರಾಜ್ಯದ ಹೆಣ್ಣು ಮಕ್ಕಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 'ಸ್ಪೂರ್ತಿ ಯೋಜನೆ' ಜಾರಿ

ಬೆಂಗಳೂರು : ರಾಜ್ಯದ ಹೆಣ್ಣು ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಸ್ಪೂರ್ತಿ ಯೋಜನೆ ಜಾರಿ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ನಿನ್ನೆ ನಡೆದ ಸಚಿವ ಸಂಪುಟ ಸಭೆ ಬಳಿಕ ಈ ಕುರಿತು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಸುದ್ದಿಗಾರರಿಗೆ ಮಾಹಿತಿ ನೀಡಿದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ನಿಗಮದ ಮೂಲಕ ಸ್ಪೂರ್ತಿ ಯೋಜನೆ ಜಾರಿಗೊಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಅದೇಜಲಜೀವನ್ ಮಿಷನ್ ಅಡಿಯಲ್ಲಿ ಶಿವಮೊಗ್ಗ ತಾಲೂಕಿನ ಆನವೇರಿ ಮತ್ತು ಇತರೆ 23 ಗ್ರಾಮಗಳಿಗೆ7 26.62 ಕೋಟಿ ಅಂದಾಜು ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಗೆ ಹೆಚ್ಚುವರಿಯಾಗಿ 54.60 ಕೋಟಿ ಷೇರು ಬಂಡವಾಳ ಬಿಡುಗಡೆಗೆ ಒಪ್ಪಿಗ. ಬೆಂಗಳೂರು ನಗರದ ಕಲಾಸಿಪಾಳ್ಯದಲ್ಲಿ 63.17 ಕೋಟಿ ವೆಚ್ಚದಲ್ಲಿ ನವೀನ ಮಾದರಿಯಲ್ಲಿ ನಿರ್ಮಿಸಿರುವ ಬಸ್ ಟರ್ಮಿನಲ್ ಕಾಮಗಾರಿಗೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದರು.