ರಾಜ್ಯದ ನೀರಾವರಿ ಯೋಜನೆಗಳಿಗೆ ಸಿಎಂ ಬಂಪರ್ : ಮಹದಾಯಿ ಯೋಜನೆಗೆ 1,000 ಕೋಟಿ ರೂ. ಅನುದಾನ ಘೋಷಣೆ
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ನೀರಾವರಿ ಯೋಜನೆಗಳಿಗೆ ಬಂಪರ್ ಘೋಷಣೆ ಮಾಡಿದ್ದು, ಮಹಾದಾಯಿ ಯೋಜನೆಗೆ ಬರೋಬ್ಬರಿ 1,000 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ರಾಜ್ಯ ಕೃಷಿ ನೀರಾವರಿ ಯೋಜನೆಗಳಿಗೆ ಮಹತ್ವದ ಘೋಷಣೆ ಮಾಡಲಾಗಿದ್ದು, ಮಹದಾಯಿ ಯೋಜನೆಗೆ 1000 ಕೋಟಿ ರೂ.
ಸಮಾಜದ ಏಳಿಗೆಗೆ ಮಾನವ ಅಭಿವೃದ್ಧಿ ಸೂಚ್ಯಂಕವನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ ಶಿಕ್ಷಣ, ಆರೋಗ್ಯ ಹಾಗೂ ಪೌಷ್ಟಿಕತೆ ವಲಯಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕರು. ಕಾರ್ಯಕರ್ತೆಯರು, ಹಾಗೂ ಬಿಸಿಯೂಟ ತಯಾರಕರು ಹಾಗೂ ಸಹಾಯಕರು ಮತ್ತು ಗ್ರಂಥಪಾಲಕರ ಸೇವೆಯನ್ನು ಗುರುತಿಸಿ, ಅವರಿಗೆ ನೀಡುವ ಮಾಸಿಕ ಗೌರವಧನವನ್ನು 1,000 ರೂ. ದಂತೆ ಹೆಚ್ಚಿಸಲು ನಿರ್ಧರಿಸಲಾಗಿದೆ.
ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ 725 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. 2022-23ನೇ ಸಾಲಿನಲ್ಲಿ ಈ ಸೌಲಭ್ಯವನ್ನು ಭೂರಹಿತ ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರು ಹಾಗೂ ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದ್ದು, ಹೆಚ್ಚುವರಿಯಾಗಿ 3 ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯನ್ನು ರಾಜ್ಯದ ಸಿಂಪಿಗರ ಮಕ್ಕಳಿಗೂ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಬಾರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರು ಸ್ವಯಂಉದ್ಯೋಗ ಕೈಗೊಳ್ಳಲು ವಿದ್ಯುತ್ ಚಾಲಿತ ತ್ರಿಚಕ್ರ ಸರಕು ವಾಹನ ಖರೀದಿಗೆ 50 ಸಾವಿರ ರೂ. ಧನ ಸಹಾಯ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಮುಂದುವರೆಸಿ ಬಾಬು ಜಗಜೀವನರಾಮ್ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಎಲೆಕ್ರಿಕ್ ತಿಚಕ್ರ ಅಥವಾ ನಾಲ್ಕು ಚಕ್ರದ ಸರಕು ವಾಹನಗಳನ್ನು ಖರೀದಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ಫಲಾನುಭವಿಗಳಿಗೆ ಶೇ.50 ರಷ್ಟು 2 ಲಕ್ಷ ರೂ. ವರೆಗೂ ಸಹಾಯಧನವನ್ನು ನೀಡಲಾಗುವುದು, ಇದಕ್ಕಾಗಿ 400 ಕೋಟಿ ರೂ. ವೆಚ್ಚವಾಗಲಿದೆ ಎಂದರು.
ರಾಜ್ಯ ಕೃಷಿ ನೀರಾವರಿ ಯೋಜನೆಗಳಿಗೆ ಮಹತ್ವದ ಘೋಷಣೆ ಮಾಡಲಾಗಿದ್ದು, ಮಹದಾಯಿ ಯೋಜನೆಗೆ 1000 ಕೋಟಿ ರೂ. ಕಳಸಾ ಬಂಡೂರಿ ಯೋಜನೆ 80 ಕೋಟಿ ರೂ. ಗಂಗಾ ಕಲ್ಯಾಣ ಯೋಜನೆಗೆ 675 ಕೋಟಿ ರೂ. ಹಾಗೂ ನರೇಗಾ ಯೋಜನೆ 1000 ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.