ರಾಜ್ಯದಲ್ಲಿ ` H3N2' ವೈರಸ್ ಆತಂಕ : ಇಂದು ಸಚಿವ ಸುಧಕಾರ್ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ದೀರ್ಘಕಾಲಿಕ ಕೆಮ್ಮು ಹಾಗೂ ಜ್ವರ ಲಕ್ಷಣದ H3N2 ಸೋಂಕು ಉಲ್ಬಣದ ಆತಂಕದ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸಚಿವ ಡಾ. ಸುಧಾಕರ್ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಿದ್ದು, H3N2ಇನ್ ಪ್ಲುಯಂಜಾ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, H3N2 ಬಗ್ಗೆ ಈಗಾಗಲೇ ಆರೋಗ್ಯ ಇಲಾಖೆ ಆಯುಕ್ತರು ಹಾಗೂ ಪ್ರಧಾನ ಕಾರ್ಯದರ್ಶಿಗಳ ಜೊತೆಗೆ ಚರ್ಚೆ ಮಾಡಿದ್ದೇವೆ. ಸೋಮವಾರ ತಜ್ಞರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ಕರೆದಿದ್ದೇನೆ. ಬಳಿಕ ಕಾಯಿಲೆಯ ಸ್ಥಿತಿಗತಿ ಹಾಗೂ ರಾಜ್ಯದಲ್ಲಿ ಯಾವ ಕ್ರಮ ಕೈಗೊಳ್ಳುತ್ತೇವೆ ಎಂಬ ಸಂಪೂರ್ಣ ವಿವರ ನೀಡುತ್ತೇನೆ ಎಂದಿದ್ದಾರೆ.
ದೀರ್ಘಕಾಲದಿಂದ ಕೆಮ್ಮು ಹಾಗೂ ಜ್ವರದ ಲಕ್ಷಣ ಇದ್ದರೆ H3N2 ವೈರಸ್ ಕಾರಣವಾಗಿರಬಹುದು. ದೇಶಾದ್ಯಂ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ರೋಗಲಕ್ಷಣ ಉಂಟಾದರೆ ಪರೀಕ್ಷೆ ನಡೆಸೆ ಆಯಂಟಿಬಯೋಟಿಕ್ ಮಾತ್ರೆಗಳನ್ನು ಬಳಸದಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಎಚ್ಚರಿಕೆ ನೀಡಿದೆ.