ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ: ಅರುಣ್ ಸಿಂಗ್ ವಿಶ್ವಾಸ

ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ: ಅರುಣ್ ಸಿಂಗ್ ವಿಶ್ವಾಸ

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್ ಪಕ್ಷ ಹೆಸರು ಇಲ್ಲದ ಹಾಗೆ ಆಗುತ್ತಿದೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸೀಟು ಕೂಡ ಗೆದ್ದಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪ್ರವಾಸ ನಡೆಯುತ್ತಿದೆ. ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಚರ್ಚಿಸುತ್ತಿದ್ದೇವೆ. ಬೂತ್ ಮಟ್ಟದ ಕಾರ್ಯಕರ್ತರಿಂದಲೇ ಪಕ್ಷ ಗೆಲ್ಲುತ್ತದೆ ಎಂದರು.

ಸಂಘಟನೆ ಮತ್ತು ಕಾರ್ಯಕರ್ತರ ಪಕ್ಷ ಬಿಜೆಪಿ. ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್ ಪಕ್ಷ ಹೆಸರು ಇಲ್ಲದ ಹಾಗೆ ಆಗುತ್ತಿದೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸೀಟು ಗೆದ್ದಿಲ್ಲ. ಹಿಮಾಚಲ ಪ್ರದೇಶ ಮತ್ತು ಗುಜರಾತ್ ನಲ್ಲಿ ಕೂಡ ಕಾಂಗ್ರೆಸ್ ಸೋಲುತ್ತದೆ. ಎಲ್ಲಾ ಕಡೆ ಬಿಜೆಪಿ ಗೆದ್ದುಕೊಂಡು ಬರುತ್ತಿದೆ. ಮುಂದಿನ ದಿನದಲ್ಲೂ ಕರ್ನಾಟಕದಲ್ಲಿ ಬಿಜೆಪಿ ವಿಜಯಶಾಲಿಯಾಗುತ್ತದೆ ಎಂದು ಹೇಳಿದರು.